Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ದಿನ’ ಆಚರಣೆಗೆ ಶಿಕ್ಷಣ ಇಲಾಖೆ ಸುತ್ತೋಲೆ

---Advertisement---

ಬೆಂಗಳೂರು : ಭಾರತದ ಸಂವಿಧಾನವನ್ನು ಅಂಗೀಕರಿಸಿದ ಸವಿನೆನಪಿಗಾಗಿ ನವೆಂಬರ್ 26ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ದಿನ’ವನ್ನು (Constitution Day) ಅರ್ಥಪೂರ್ಣವಾಗಿ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ (ರಾಜ್ಯ ಯೋಜನಾ ನಿರ್ದೇಶಕರ ಕಛೇರಿ) ಸುತ್ತೋಲೆ ಹೊರಡಿಸಿದೆ.

ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸೂಚನೆಯ ಮೇರೆಗೆ, ವಿದ್ಯಾರ್ಥಿಗಳಲ್ಲಿ ಸಂವಿಧಾನದ ಮೌಲ್ಯಗಳು, ತತ್ವಗಳು ಮತ್ತು ಪ್ರಾಮುಖ್ಯತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಚರಣೆಯ ಪ್ರಮುಖ ಚಟುವಟಿಕೆಗಳು

ಸಂವಿಧಾನದ ಪೀಠಿಕೆ ವಾಚನ: ನವೆಂಬರ್ 26ರಂದು ಬೆಳಗ್ಗೆ ಶಾಲಾ ಪ್ರಾರ್ಥನಾ ಸಮಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಹಾಗೂ ಪೋಷಕರು ಒಟ್ಟಾಗಿ ಸಂವಿಧಾನದ ಪೀಠಿಕೆಯನ್ನು ಓದಬೇಕು.

ವಿವಿಧ ಸ್ಪರ್ಧೆಗಳ ಆಯೋಜನೆ: ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪೋಸ್ಟರ್ ತಯಾರಿಕೆ, ರಸಪ್ರಶ್ನೆ (Quiz), ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಬೇಕು.

ಸೃಜನಾತ್ಮಕ ಚಟುವಟಿಕೆಗಳು: ಸಂವಿಧಾನದಿಂದ ಪ್ರೇರಿತವಾದ ಬುಕ್‌ಮಾರ್ಕ್‌ಗಳು, ಬ್ಯಾಡ್ಜ್‌ಗಳು ಅಥವಾ ಕೊಲಾಜ್‌ಗಳನ್ನು ವಿನ್ಯಾಸಗೊಳಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು.

ಐತಿಹಾಸಿಕ ಅರಿವು: ಭಾರತದ ಸಂವಿಧಾನದ ಐತಿಹಾಸಿಕ ವಿಕಾಸ ಮತ್ತು ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಮಹನೀಯರ ಕುರಿತು ಎನ್‌ಸಿಇಆರ್‌ಟಿ (NCERT) ಸಿದ್ಧಪಡಿಸಿದ ಕಿರುಟಿಪ್ಪಣಿ ಹಾಗೂ ಸಂಸತ್ತಿನ ಅಧಿಕೃತ ವೆಬ್‌ಸೈಟ್ ಮಾಹಿತಿಯನ್ನು ಬಳಸಿಕೊಂಡು ಮಕ್ಕಳಿಗೆ ಅರಿವು ಮೂಡಿಸಬೇಕು.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಕಾರ್ಯಕ್ರಮದ ಜಿಯೋ-ಟ್ಯಾಗ್ (GEO Tagged) ಫೋಟೋ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡಿ, ಅದರ ಲಿಂಕ್ ಅನ್ನು ಇಲಾಖೆ ನೀಡಿರುವ ಸ್ಪ್ರೆಡ್‌ಶೀಟ್‌ನಲ್ಲಿ (Spreadsheet) ದಾಖಲಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕರು (ಗುಣಮಟ್ಟ) ಸೂಚಿಸಿದ್ದಾರೆ.

Join WhatsApp

Join Now

Join Telegram

Join Now