ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 27 : ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ವೃದ್ಧಿಸುವುದರ ಜೊತೆಗೆ ಸಮಾಜದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ಗುಣವನ್ನು ಬೆಳೆಸುತ್ತದೆ. ಶಿಕ್ಷಣಕ್ಕೆ ಅಪಾರ ಶಕ್ತಿ ಇದ್ದು, ಸಮಾಜದಲ್ಲಿ ಉನ್ನತ ಗೌರವ ಮತ್ತು ಸ್ಥಾನಮಾನ ಪಡೆಯಲು ಅದು ಪ್ರಮುಖ ಸಾಧನವಾಗಿದೆ ಎಂದು ಸಚಿವ ಟಿ. ರಘುಮೂರ್ತಿ ಹೇಳಿದರು.
ನಗರದ ಕಾಡುಗೊಲ್ಲರ ಸಮುದಾಯ ಭವನದಲ್ಲಿ ತಾಲೂಕು ಗೊಲ್ಲ ನೌಕರರ ಸಂಘದ ವತಿಯಿಂದ 2025–26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಾಡುಗೊಲ್ಲರ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ರೈತರು ಹಾಗೂ ಸಮುದಾಯದ ಜನರು ಪಡೆದುಕೊಳ್ಳಬೇಕು. ಮೂರು ಎಕರೆ ಜಮೀನು ಹೊಂದಿರುವ ಸಣ್ಣ ರೈತರಿಗೆ ‘ನೇಗಿಲಯೋಗಿ’ ಯೋಜನೆಯಡಿ ಹಾಗೂ ರಸ್ತೆ ಬದಿಯಲ್ಲಿ ತೇಗದ ಮರ ಬೆಳೆಸುವ ಯೋಜನೆಯ ಮೂಲಕ ಶೇ.70ರಷ್ಟು ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ತಿಳಿಸಿದರು
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಒನಕಲ್ ಮಠದ ಡಾ.ಬಸವ ರಮಾನಂದ ಸ್ವಾಮೀಜಿ, ಕಾಡುಗೊಲ್ಲರನ್ನು ಅಲೆಮಾರಿ ಮತ್ತು ಅರೆ ಅಲೆಮಾರಿ ಪಟ್ಟಿಯಿಂದ ಕೈಬಿಡಲಾಗಿದ್ದು, ಅವರನ್ನು ಬಿಸಿಎಂ-ಎ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಕಾಡುಗೊಲ್ಲರ ಜನಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು. ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಪಾವಗಡ ರಸ್ತೆಯಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಬೇಕು. ಎತ್ತಪ್ಪನ ಗುಡ್ಡದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಜಾನಪದ ಸಿರಿಯಜ್ಜಿ ಸಮಾಧಿಯ ಅಭಿವೃದ್ಧಿಗೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕುರುಕ್ಷೇತ್ರದಲ್ಲಿ ಸಚಿವ ಟಿ ರಘುಮೂರ್ತಿ ಅವರ ಕಾರ್ಯ ಉತ್ತಮವಾಗಿದೆ. ಎಲ್ಲ ಸಮುದಾಯಗಳಿಗೂ ಸಮುದಾಯ ಭವನಗಳ ನಿರ್ಮಿಸಿ ಕೊಟ್ಟಿದ್ದಾರೆ ಹಾಗೂ ರಸ್ತೆಗಳ ವಿಸ್ತರಣೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಇಂಜಿನಿಯರ್ ಕಾಲೇಜ್ ಜಿಟಿಟಿಸಿ ಕೇಂದ್ರ ಹಾಗೂ ನೂತನ ಶಾಲಾ ಕಟ್ಟಡಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ ಎಂದರು..
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಸಮುದಾಯದ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಮತ್ತಷ್ಟು ಆಸಕ್ತಿ ಮೂಡಿಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಪಾ ಪಚಾಯಿತಿ ಮಾಜಿ ಅಧ್ಯಕ್ಷೆ ಶಾಂತಕುಮಾರಿ, ಕಾಡುಗೋಲ್ಲ ನೌಕರ. ಸಂಘದ ಅಧ್ಯಕ್ಷ ಶ್ರೀಕಾಂತ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಕಾಡುಗೊಲ್ಲರ ಸಂಘದ ಅಧ್ಯಕ್ಷ ರವಿಕುಮಾರ್,. ಕೆ. ಮಹೇಶ್ವರಪ್ಪ, ಶಾಂತಮ್ಮ, ತಿಪ್ಪೇಸ್ವಾಮಿ,ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಜಿ.ಟಿ. ಶಶಿಧರ್, ಚಾರುಮತಿ ,ಚಿತ್ರಾವತಿ ಎಸ್ ಟಿ. ರಮೇಶ್, ಮೂಡಲಗಿರಿಯಪ್ಪ, ಬೆಳೆಗೆರೆ ಸುರೇಶ್ ನಾಗರಾಜ್ ,ಜಿಟಿ ಮಂಜುನಾಥಸ್ವಾಮಿ,ಡಾ.ಮಂಜುನಾಥ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯೆ ವೆಂಕಟಲಕ್ಷ್ಮಿ,ಮಂಜುಣ್ಣ ಸಿದ್ದಾಪುರ ಸೆರಿದಂತೆ ಕಾಡುಗೊಲ್ಲ ಸಮುದಾಯದ ಮುಖಂಡರು ನೌಕರ ಸಂಘದ ಪದಾಧಿಕಾರಿಗಳು ಮಹಿಳಾ ಪದಾಧಿಕಾರಿಗಳು ಹಾಜರಿದ್ದರು.










