Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶ ಕಟ್ಟಲು ಮತ್ತು ಮಾನವನ ಬದುಕು ಹಸನಾಗಬೇಕೆಂದರೆ ಶಿಕ್ಷಣ ಮುಖ್ಯ : ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು

Facebook
Twitter
Telegram
WhatsApp

 

ಚಿತ್ರದುರ್ಗ, (ಸೆ.05) : ಮಾನವನ ಬದುಕು ಹಸನಾಗಬೇಕೆಂದರೆ ಶಿಕ್ಷಣ ಬಹಳ ಮುಖ್ಯ. ದೇಶವನ್ನು ಕಟ್ಟಲು ಶಿಕ್ಷಣ ಮೊದಲ ಸ್ಥಾನ ವಹಿಸುತ್ತದೆ ಎಂದು ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು ಹೇಳಿದರು.

ನಗರದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಎಸ್.ಜೆ.ಎಂ. ಶಾಂತಿ ಮತ್ತು ಪ್ರಗತಿ ಫೌಂಡೇಶನ್ (ರಿ)  ಚಿತ್ರದುರ್ಗ ಇವರ ಸಹಯೋಗದಲ್ಲಿ ನಡೆದ ಮೂವತ್ತೆರಡನೆ ವರ್ಷದ ಒಂಬತ್ತನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಶ್ರೀಗಳು, ಸರ್ವಪಲ್ಲಿ ರಾಧಾಕೃಷ್ಣನ್ ಅವರು ಸಾಮಾನ್ಯ ಶಿಕ್ಷಕರಾಗಿ, ನಂತರ ರಾಷ್ಟ್ರದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದರು. ಅವರ ಸಾಧನೆ ನಮಗೆಲ್ಲ ಆದರ್ಶ. ದೀನ ದಲಿತರ ಏಳ್ಗೆಗಾಗಿ ನಾಡಿನ ಅನೇಕ ಮಠಮಾನ್ಯಗಳು ಶ್ರಮಿಸುತ್ತಿವೆ. ಶ್ರೀಮಠದಲ್ಲಿ ಕರ್ತೃಗದ್ದುಗೆ ಪೂಜಾಕೈಂಕರ್ಯಗಳು, ನಿತ್ಯದಾಸೋಹ, ಮುರುಘಾವನ ವೀಕ್ಷಣೆ ಎಂದಿನಂತೆ ಇರುತ್ತದೆ. ಶ್ರೀಮಠದ ಭಕ್ತರು ಎಂದಿನಂತೆ ಸಹಕರಿಸಬೇಕೆಂದರು.

ಗೌರವ ಉಪಸ್ಥಿತಿ ವಹಿಸಿದ್ದ ಗುರುಮಠಕಲ್‍ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದಂತೆ ಸಾಮೂಹಿಕ ಕಲ್ಯಾಣ ಮಹೋತ್ಸವ ಆರಂಭಿಸಲಾಯಿತು. 17 ಸಾವಿರ ಜೋಡಿಗಳು ವಿವಾಹವಾಗಿರುವುದು ದಾಖಲೆಯಾಗಿದೆ.

ಇದೊಂದು ಆದರ್ಶ ಕಾರ್ಯಕ್ರಮ. ಸತಿಪತಿಗಳೊಂದಾದ ಭಕ್ತಿ ಶಿವಂಗೆ ಹಿತವಪ್ಪುದು. ಸಾಂಸಾರಿಕ ಬದುಕಿನಲ್ಲಿ ಸಾಮರಸ್ಯ ಮುಖ್ಯ. ಬದುಕು ನಿಂತ ನೀರಾಗದೆ ನಿರಂತರ ಹರಿಯುವ ನದಿಯಾಗಬೇಕು. ಅದೆಷ್ಟೋ ಬಡಜನತೆ ಇಲ್ಲಿ ವಿವಾಹವಾಗಿ ಸುಂದರವಾದ ಬದುಕನ್ನು ಕಟ್ಟಿಕೊಂಡಿದ್ದಾರೆ. ಅವರ ಬದುಕು ಹಸನಾಗಿದೆ. ಬಸವಾದಿ ಶರಣರ ಆಶಯದಂತೆ ನಡೆಯುವ ಈ ವಿವಾಹ ಕಾರ್ಯಕ್ರಮ ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸಿದೆ. ಮದುವೆ ಎಂಬುದು ಆಡಂಬರವಲ್ಲ, ಅದೊಂದು ಆದರ್ಶ ಎಂದರು.

ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 6 ಜೋಡಿಗಳ ವಿವಾಹ ನೆರವೇರಿತು.
ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯಕಾರಿ ಮಂಡಳಿಯ ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಎಸ್. ಷಣ್ಮುಖಪ್ಪ, ಸಿದ್ದಾಪುರ ಎಸ್.ವಿ.ನಾಗರಾಜಪ್ಪ, ಹೆಚ್. ಆನಂದಪ್ಪ, ಮಹಡಿ ಶಿವಮೂರ್ತಿ ವೇದಿಕೆಯಲ್ಲಿದ್ದರು.

ಅಥಣಿಯ ಶ್ರೀ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮಿಗಳು, ದಾವಣಗೆರೆಯ ಶ್ರೀ ಬಸವಪ್ರಭು ಸ್ವಾಮಿಗಳು, ಹಾವೇರಿಯ ಶ್ರೀ ಬಸವಶಾಂತಲಿಂಗ ಸ್ವಾಮಿಗಳು, ಶರಣೆ ಮುಕ್ತಾಯಕ್ಕ, ಶ್ರೀ ಗುಂಡಯ್ಯ ಸ್ವಾಮಿಗಳು, ಹುಲಸೂರಿನ ಶ್ರೀ ಶಿವಾನಂದ ಸ್ವಾಮಿಗಳು ಮುಂತಾದವರು ಭಾಗವಹಿಸಿದ್ದರು.
ಜಮುರಾ ಕಲಾವಿದರು ವಚನ ಪ್ರಾರ್ಥನೆ ಮಾಡಿದರು. ಟಿ.ಪಿ. ಜ್ಞಾನಮೂರ್ತಿ ಸ್ವಾಗತಿಸಿದರು. ಶಿವಕುಮಾರ್ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!