Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ: ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

 

ಚಿತ್ರದುರ್ಗ. ಜೂನ್24: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

 

2026-27ನೇ ಸಾಲಿಗೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಕಾರ್ಮಿಕರ ಮಾಸಿಕ ವೇತನವು ₹35,000/- ಕ್ಕಿಂತ ಮೀರಿರಬಾರದು. ವಿದ್ಯಾರ್ಥಿಯು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದವರಾಗಿದ್ದರೆ ಕನಿಷ್ಠ ಶೇ 50 ರಷ್ಟು ಮತ್ತು ಪ.ಜಾ/ಪ.ಪಂ ವರ್ಗದವರಾಗಿದ್ದರೆ ಶೇ.45 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.

 

ಅರ್ಹ ವಿದ್ಯಾರ್ಥಿಗಳು ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನಕ್ಕೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆಗಳಾದ 080-23475188, 8277291175, 82772120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಉಪವಿಭಾಗ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===========

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now