ಆಯುರ್ವೇದ ಆಸ್ಪತ್ರೆ ಮಂಜೂರಾತಿಗೆ ಪ್ರಯತ್ನ : ಕೆ.ಎಸ್.ನವೀನ್

suddionenews
1 Min Read

ಚಿತ್ರದುರ್ಗ, (ಜೂನ್.21) :  ಜಗತ್ತಿಗೆ ಯೋಗ ಭಾರತ ನೀಡಿದ ಮಹತ್ವದ ಕೊಡುಗೆಯಾಗಿದೆ. ಭಾರತ ತನ್ನ ವಿದ್ಯೆ, ಕಲೆ, ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದೆ. ಯೋಗದ ಮೂಲಕ ಯಾವುದೇ ಉಪಕರಣ ಹಾಗೂ ಸಲಕರಣೆಗಳಿಲ್ಲದೆ ದೇಹ, ಮನಸ್ಸು ಹಾಗೂ ಬುದ್ಧಿಯನ್ನು ಸಮತೋಲನದಲ್ಲಿಡಬಹುದು ಎಂದು ವಿಧಾನ ಪರಿಷತ್ ಕೆ.ಎಸ್.ನವೀನ್ ಹೇಳಿದರು.

ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಆಯುಷ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಿತ್ರದುರ್ಗ ನಗರದ ಐತಿಹಾಸಿಕ ಕಲ್ಲಿನ ಕೋಟೆ ಹಾಗೂ ಚಂದ್ರವಳ್ಳಿಯಲ್ಲಿ ಸಾಮೂಹಿಕ ಯೋಗ ಮಾಡುವುದರ ಮೂಲಕ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಯೋಗ ಮಾಡವುದರ ಮೂಲಕ ಜಗತ್ತಿಗೆ ಯೋಗದ ಮಹತ್ವ ಸಾರಿದ್ದಾರೆ. ಪ್ರತಿಯೊಬ್ಬರು ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಬೇಕು. ಯೋಗ ಕಲಿತು ಬೇರೆಯವರಿಗೂ ಕಲಿಸುವ ಸಂಕಲ್ಪ ಮಾಡಬೇಕು. ಯುವಕರ ಮನಸ್ಸು ಆಧುನಿಕತೆ ಕಡೆ ವಾಲುತ್ತಿದೆ. ಯುವ ಜನತೆಯನ್ನು ಯೋಗದ ಕಡೆ ಸೆಳೆಯಬೇಕು. ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗ ತರಬೇತಿ ನೀಡಬೇಕು. ಮುಂದಿನ ವರ್ಷ ಯೋಗಾಭ್ಯಾಸ ಮಾಡುವವರ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರದ ಆದೇಶ ಪಾಲನೆಗೆ ಯೋಗ ದಿನಾಚರಣೆ ಮಾಡದೆ ಅಭಿಯಾನದ ರೀತಿ ಮಾಡಬೇಕು ಎಂದು ಸಲಹೆ ನೀಡಿದರು.

ಚಿತ್ರದುರ್ಗ ನಗರದಲ್ಲಿ 50 ಹಾಸಿಗೆ ಸಾಮರ್ಥ್ಯದ ಆಯುರ್ವೇದ ಆಸ್ಪತ್ರೆ ಮಂಜೂರಾತಿಗೆ ಪ್ರಯತ್ನ ಮಾಡಲಾಗುವುದು. ಜಿಂದಾಲ್ ಹಾಗೂ ಉಜಿರೆ ಮಾದರಿಯಲ್ಲಿ ನೈಸರ್ಗಿಕ ಚಿಕಿತ್ಸೆ ಕೇಂದ್ರ ಸ್ಥಾಪನೆ ಮಾಡಿ, ಮಧ್ಯ ಕರ್ನಾಟಕದಲ್ಲಿ ಮಾದರಿ ಎನಿಸುವಂತೆ ಕಾರ್ಯನಿವರ್ಹಿಸಲಾಗುವುದು ಎಂದರು.

Share This Article
Leave a Comment

Leave a Reply

Your email address will not be published. Required fields are marked *