Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಲ್ಲಿ ಬಿಜೆಪಿ ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ

---Advertisement---

ಬೆಂಗಳೂರು: ರಾಜಧಾನಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ರಾಜಕೀಯ ಸಮರ ತಾರಕಕ್ಕೇರಿದ್ದು, ಪ್ರತಿಭಟನೆಯ ವೇಳೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆಮೊಟ್ಟೆ ಎಸೆದಿರುವ ಘಟನೆ ನಡೆದಿದೆ.

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಈ ಸಂದರ್ಭದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ನಮ್ಮ ನಾಯಕ ಆರ್. ಅಶೋಕ್ ಅವರು ಮುತ್ತಿಗೆಗೆ ಕರೆ ನೀಡಿದ್ದರು. ಅವರು ಕೆಪಿಸಿಸಿ ಕಚೇರಿ ಹತ್ತಿರವೇ ಇರಬಹುದು ಎಂದು ಭಾವಿಸಿದ ನನ್ನ ಡ್ರೈವರ್ ಅಲ್ಲೇ ಕಾರು ನಿಲ್ಲಿಸಿ ಇಳಿಯಲು ಹೇಳಿದ. ನಾನು ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಓಡಿಸಿಕೊಂಡು ಬಂದು ನನ್ನ ಮೇಲೆ ಹಲ್ಲೆ ನಡೆಸಿ ಮೊಟ್ಟೆ ಎಸೆದರು ಎಂದು ಶಾಸಕ ಹರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

Join WhatsApp

Join Now

Join Telegram

Join Now