Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲಾ ಮಕ್ಕಳಿಗೆ ಇನ್ಮುಂದೆ ವಾರದಲ್ಲಿ 4 ದಿನ ಮೊಟ್ಟೆ : ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಅನುದಾನವೂ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ನಾನು ಈಗಷ್ಠೆ ಪ್ರತಿಷ್ಠಾನದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಬಂದಿದ್ದೇನೆ. ಮಕ್ಕಳಿಗೆ ಪ್ರತಿದಿನ ಒಂದು ಮೊಟ್ಟೆಯನ್ನು ವಾರದ ನಾಲ್ಕು ದಿನ ವಿತರಿಸಲಿದ್ದಾರೆ ಎಂದಿದ್ದಾರೆ. ಆದರೆ ಯಾವಾಗಿನಿಂದ ಈ ಕಾರ್ಯ ಆರಂಭವಾಗಬಹುದು ಎಂಬ ಬಗ್ಗೆ ಮಾತ್ರ ಮಾಹಿತಿ ನೀಡಲಿಲ್ಲ.

ಮಕ್ಕಳಿಗೆ ಬೇಕಾದ ಪೌಷ್ಠಿಕಾಂಶ ಒದಗಿಸಲು ಶಿಕ್ಷಣಾ‌ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯೊಂದಿಗೆ ಅಜಿಂ ಪ್ರೇಮ್ ಜೀ ಫೌಂಡೇಷನ್ ಕೈ ಜೋಡಿಸಿದೆ. ಇದಕ್ಕಾಗಿ 1,500 ಕೋಟಿ ದೇಣಿಗೆ ನೀಡಲು ಫೌಂಡೇಷನ್ ಮುಂದೆ ಬಂದಿದೆ. ಈಗಾಗಲೇ ಸರ್ಕಾರ ಹಾಗೂ ಅಜೀಂ ಪ್ರೇಮ್ ಜೀ ನಡುವೆ ಈ ಸಂಬಂಧ ಔಪಚಾರಿಕ ಒಪ್ಪಂದಕ್ಕೆ ಸಹಿ ಬಿದ್ದಿದೆ. ಇನ್ಮುಂದೆ ಮಕ್ಕಳಿಗೆ ಬೇಕಾದ ಪೌಷ್ಠಿಕಾಂಶ ಈ ಮೂಲಕ ಸಿಗಲಿದೆ.

ಈಗ ಸದ್ಯಕ್ಕೆ 1 ರಿಂದ 10ನೇ ತರಗತಿಯಲ್ಲಿನ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆ ಹಣ್ಣನ್ನು ವಿತರಣೆ ಮಾಡಲಾಗುತ್ತಿತ್ತು. ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆಯ ಪ್ರಸ್ತಾಪ ಸರ್ಕಾರದ ಮುಂದೆ ಇತ್ತು. ಆದರೆ ಹಣದ ಕೊರತೆಯಿಂದಾಗಿ ಅದನ್ನು ಅನುಷ್ಠಾನಗೊಳಿಸಲು ಇಲಾಖೆಗೆ ಸಾಧ್ಯವಾಗಿರಲಿಲ್ಲ. ಇದೀಗ ಮಕ್ಕಳ ಆರೋಗ್ಯದ ವಿಚಾರಕ್ಕೆ ಅಜಿಂ ಪ್ರೇಮ್ ಜೀ ಫೌಂಡೇಷನ್ ಕೈ ಜೋಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

2024 ರ ವಿಶ್ವದ ಟಾಪ್ 100 ನಗರಗಳ ಪಟ್ಟಿ ಬಿಡುಗಡೆ : ಭಾರತದ ಈ ನಗರಕ್ಕೆ ಎಷ್ಟನೇ ಸ್ಥಾನ ? ಇಲ್ಲಿದೆ ಆಸಕ್ತಿಕರ ಮಾಹಿತಿ…!

ಸುದ್ದಿಒನ್ | ವಿಶ್ವದ 100 ಅತ್ಯಂತ ಆಕರ್ಷಕ ನಗರಗಳ ಪಟ್ಟಿ-2024 ಬಿಡುಗಡೆಯಾಗಿದೆ. ಇದರಲ್ಲಿ ಭಾರತದಿಂದ ಒಂದು ನಗರ ಮಾತ್ರ ಸ್ಥಾನ ಪಡೆದಿದೆ. ಈಗಾಗಲೇ ಕಳೆದ 3 ವರ್ಷಗಳಿಂದ ಟಾಪ್-1 ಸ್ಥಾನದಲ್ಲಿದ್ದ ಫ್ರಾನ್ಸ್ ರಾಜಧಾನಿ ಪ್ಯಾರಿಸ್

ಇತಿಹಾಸ ನಿರ್ಮಿಸಿದ ಪುಷ್ಪ 2 : ಫಸ್ಟ್ ಡೇ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ ?

  ಸುದ್ದಿಒನ್ | ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ ಅನ್ನು ಚಿಂದಿ ಉಡಾಯಿಸಿದೆ. ನಿರ್ಮಾಪಕರು ಮೊದಲೇ ಹೇಳಿದಂತೆ, ಈ ಚಿತ್ರ ಮೊದಲ ದಿನದಲ್ಲಿ ಕಲೆಕ್ಷನ್

ವೈದ್ಯರ ನಿರ್ಲಕ್ಷ್ಯದಿಂದ ಮಗು ಜನನ : ದಂಡ ವಿಧಿಸಿದ ಕನ್ಸ್ಯೂಮರ್ ಕೋರ್ಟ್

    ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 : ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಜಿಲ್ಲಾ ಆಸ್ಪತ್ರೆಯ ಹಿರಿಯ ಪ್ರಸೂತಿ ತಜ್ಞ ಡಾ.ಶಿವಕುಮಾರ್.ಕೆ. ಅವರ ಸೇವಾ ನಿರ್ಲಕ್ಷ್ಯತೆಗೆ ರೂ. 55,000/- ಪರಿಹಾರವನ್ನು

error: Content is protected !!