Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

---Advertisement---

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೀಗ ಪ್ರಚಾರದ ನಡುವಲ್ಲೂ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಇನ್ನು ಎಳಸು, ರಾಜಕೀಯ ಜ್ಞಾನ ಇಲ್ಲದವನು ಎಂದು ಜರಿದಿದ್ದಾರೆ.

 

ಪಕ್ಷಕ್ಕೆ ಈಶ್ವರಪ್ಪ ಕೊಡುಗೆ ಏನು ಇಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ ಎಂದಾಗ ಈಶ್ವರಪ್ಪ ಕೆಂಡಾಮಂಡಲರಾಗಿದ್ದಾರೆ‌ ನಾಲ್ಕು ದಶಕಗಳ ಕಾಲ ಪಕ್ಷಕ್ಕಾಗಿ ಅವರಪ್ಪನ ಜೊತೆಗೆ ಕೆಲಸ ಮಾಡಿದ್ದೇನೆ. ಅವನು ಹೋಗಿ ಅವರಪ್ಪ ಹಾಗೂ ಅವರ ಅಣ್ಣನಿಗೆ ನನ್ನ ಬಗ್ಗೆ ಕೇಳಲಿ. ಒಂದು ವೇಳೆ ಯಡಿಯೂರಪ್ಪ ಸಹ ನನ್ನ ಕೊಡುಗೆ ನಗಣ್ಯ ಎಂದು ಹೇಳಿದರೆ, ಆಗ ಅಪ್ಪ-ಮಗ ಇಬ್ಬರಿಗೂ ಉತ್ತರ ಕೊಡುತ್ತೇನೆ.

 

6 ತಿಂಗಳು ದೆಹಲಿಯಲ್ಲಿ ಕೂತು ಅವರಿವರ ಕಾಲು ಹಿಡಿದು ಅಧ್ಯಕ್ಷನಾದವನಿಗೆ ರಾಜಕೀಯ ಏನು ಗೊತ್ತಿರುತ್ತದೆ ಎಂದು ಹೇಳಿದರು. ಶಿವಮೊಗ್ಗ ಕ್ಷೇತ್ರದಲ್ಲಿ ತಮ್ಮ ಗೆಲುವು ನಿಶ್ಚಿತ ಎಂದ ಈಶ್ವರಪ್ಪ ತನ್ನ ಹಿಂದೂತ್ವ ವಾದವನ್ನು ಕಾಂಗ್ರೆಸ್ ಮುಖಂಡರು ಸಹ ಒಪ್ಪಿ ಬೆಂಬಲ ಸೂಚಿಸುತ್ತಿದ್ದಾರೆ. ಕಾಂಗ್ರೆಸ್ ಒಬ್ಬ ದುರ್ಬಲ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದೆ ಮತ್ತು ರಾಘವೇಂದ್ರನನ್ನು ನಾವು ಗೆಲ್ಲಲು ಬಿಡಲ್ಲ, ಹಾಗಾಗಿ ನಮ್ಮ ಬೆಂಬಲ ನಿಮಗೆ ಅಂತ ಅವರು ಹೇಳುತ್ತಿದ್ದಾರೆ ಕೆ ಎಸ್ ಈಶ್ವರಪ್ಪ ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...