ಬೆಂಗಳೂರು: ಕಾಂಗ್ರೆಸ್ ಮುಕ್ತ ರಾಜ್ಯದ ಬಗ್ಗೆ ಮಾಜಿಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮಾತನಾಡಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಿರಿಯರು ಶಾಪ ಹಾಕಬಾರದು ಎಂದಿದ್ದಾರೆ.
ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ.
ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. “ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ” ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡ ಅವರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು “ಸಂಘ”ದೋಷದ ಫಲ.
ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು.
ನನ್ನ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















