ಚುನಾವಣಾ ಆಯುಕ್ತರ ಸುದ್ದಿಗೋಷ್ಟಿ ಆರಂಭ : ಸಿದ್ಧತೆ ಬಗ್ಗೆ ವಿವರಣೆ

suddionenews
0 Min Read

 

 

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದಂತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ. ಹಲವು ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇ 24ಕ್ಕೆ 15ನೇ ವಿಧಾನಸಭಾ ಅವಧಿ ಮುಕ್ತಾಯವಾಗಲಿದೆ.2023 ಮೇ 23ರ ಒಳಗೆ ವಿಧಾನಸಭಾ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕು.

ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. 2,62,42,561 ಪುರುಷ ಮತದಾರರಿದ್ದಾರೆ. 2,59,26,319ಮಹಿಳಾ ಮತದಾರರಿದ್ದಾರೆ. 4,699 ತೃತೀಯ ಲಿಂಗಿಗಳಿದ್ದಾರೆ ಎಂದು ಮಾಹಿತಿ‌ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *