Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ : ಸದಸ್ಯರಿಂದ ನಾಮಪತ್ರ ಸಲ್ಲಿಕೆ

---Advertisement---

ಚಿತ್ರದುರ್ಗ. ಆಗಸ್ಟ್.26: ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಇಂದು(ಆ.26) ಸೋಮವಾರ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳ ಸಲ್ಲಿಕೆ ಕಾರ್ಯ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ 29 ಸದಸ್ಯೆ ಸುನೀತಾ.ಬಿ.ಎಂ ಹಾಗೂ ವಾರ್ಡ್ ನಂ 32 ಸದಸ್ಯೆ ಎಸ್.ಸಿ.ತಾರಕೇಶ್ವರಿ ನಾಮಪತ್ರ ಸಲ್ಲಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂಬರ್ 33 ಸದಸ್ಯೆ ಶ್ರೀದೇವಿ.ಜಿ.ಎಸ್ ಹಾಗೂ ವಾರ್ಡ್ ನಂ.22 ರ ಸದಸ್ಯೆ ಬಿ.ಎಸ್.ರೋಹಿಣಿ ನಾಮಪತ್ರ ಸಲ್ಲಿಸಿದರು.

ಚುನಾವಣಾ ಅಧಿಕಾರಿಯಾಗರುವ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನಾಮಪತ್ರ ಸ್ವೀಕರಿಸಿದರು.

ಮಧ್ಯಾಹ್ನ 1 ಗಂಟೆಯಿಂದ 1 ಗಂಟೆ 5 ನಿಮಿಷದವರೆಗೆ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನಂತರ 1 ಗಂಟೆ 5 ನಿಮಿಷದಿಂದ 1 ಗಂಟೆ15 ನಿಮಿಷದವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನಾಮಪತ್ರ ಹಿಂಪಡೆಯದೆ ಇದ್ದರೆ ಮಧ್ಯಾಹ್ನ 1 ಗಂಟೆ 20 ನಿಮಿಷಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ನಗರ ಸಭೆ ಆಯುಕ್ತೆ ರೇಣುಕಾ.ಎಂ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment