ಚಿತ್ರದುರ್ಗ ತಾಲ್ಲೂಕು ಕಸಾಪ ನೂತನ ಪದಾಧಿಕಾರಿಗಳ ಆಯ್ಕೆ : ಜುಲೈ 21 ರಂದು ಅಭಿಪ್ರಾಯ ಸಂಗ್ರಹ ಸಭೆ

1 Min Read

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಚಿತ್ರದುರ್ಗ ತಾಲ್ಲೂಕು ಕಸಾಪ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆಗಾಗಿ ಜುಲೈ 21 ರಂದು ಭಾನುವಾರ ಸಂಜೆ 5 ಗಂಟೆಗೆ ಅಭಿಪ್ರಾಯ ಸಂಗ್ರಹ ಸಭೆಯನ್ನು ಕರೆಯಲಾಗಿದೆ.

ನಗರದ ಒನಕೆ ಓಬವ್ವ ವೃತ್ತ (ಡಿ.ಸಿ. ಸರ್ಕಲ್) ಬಳಿಯಿರುವ ಚಿನ್ಮೂಲಾದ್ರಿ ರೋಟರಿ ಬಾಲಭವನದಲ್ಲಿ ಸಭೆ ಕರೆಯಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು 110 ವರ್ಷಗಳ ಇತಿಹಾಸವನ್ನು ಹೊಂದಿದೆ. ನಾಡು,ನುಡಿಯ ಪ್ರಗತಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯು ಕನ್ನಡದ ಹೆಮ್ಮೆಯ ಸಂಸ್ಥೆಯಾಗಿದೆ. ಜಿಲ್ಲಾ ಕೇಂದ್ರವಾದ ಚಿತ್ರದುರ್ಗ ತಾಲ್ಲೂಕು ಘಟಕಕ್ಕೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕಾಗಿದೆ.

ಚಿತ್ರದುರ್ಗ ತಾಲ್ಲೂಕು ಕಸಾಪ ಘಟಕದಲ್ಲಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳ ಸಾಹಿತ್ಯ ಪರಿಷತ್ತಿನ ಸದಸ್ಯರು ಸಭೆಯಲ್ಲಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸಲು ಕೋರಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಕೆ.ಎಂ.ಶಿವಸ್ವಾಮಿ,
ಅಧ್ಯಕ್ಷರು, ಜಿಲ್ಲಾ ಕಸಾಪ, ಚಿತ್ರದುರ್ಗ.
9449510078

Share This Article
Leave a Comment

Leave a Reply

Your email address will not be published. Required fields are marked *