ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 03 : ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘದ ನೂತನ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ಕೆ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಡಾ.ಹೆಚ್.ಗುಡ್ಡದೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು ಅವರ ವಯೋ ನಿವೃತ್ತಿಯಿಂದ ತೆರವಾದಂತಹ ಸ್ಥಾನಗಳಿಗೆ ಈಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ನೀರಾವರಿ ಇಲಾಖೆಯ ಎಸ್.ಬಿ.ರವಿಶಂಕರ್, ಖಜಾಂಚಿಯಾಗಿ ಜೆ.ಎಸ್.ರವಿಕುಮಾರ್ (ಪೊಲೀಸ್ ರವಿ) ಅವರನ್ನು ನೇಮಕ ಮಾಡಲಾಗಿದೆ. ಸಂಸ್ಥಾಪಕ ಅಧ್ಯಕ್ಷರಾಗಿ ಸಿ.ಜೆ.ಶ್ರೀನಿವಾಸ್ ಮುಂದುವರೆದಿದ್ದು, ಗೌರವಾಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಬಿ.ವಿಮಲಾಕ್ಷಿ, ಉಪಾಧ್ಯಕ್ಷರಾಗಿ ಪಿಆರ್‍ಇಡಿ ಕೆ.ಹರೀಶ್, ಜಂಟಿ ಕಾರ್ಯದರ್ಶಿಯಾಗಿ ಕೃಷಿ ಇಲಾಖೆಯ ಟಿ.ಪಿ.ರಂಜಿತಾ, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಲಸಂಪನ್ಮೂಲ ಇಲಾಖೆಯ ಎನ್.ಹೆಚ್.ಚಂದ್ರಪ್ಪ, ಕೆ.ಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್.ಡಿ.ಸುಮಂತ್ ಹಾಗೂ ಶಿಕ್ಷಣ ಇಲಾಖೆಯ ಕೆ.ಕೆ.ಓಬಳಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















