ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಏ. 21 : ತಾಲೂಕು ಸವಿತಾ ಸಮಾಜಕ್ಕೆ ಮುಂಬರುವ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಇಂದು ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ಪಲ್ಲವಿ ಪ್ರಸನ್ನ, ತಾಲ್ಲೂಕು ಕಾರ್ಯಾಧ್ಯಕ್ಷರಾಗಿ ರಂಜಿತ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎನ್ ಸಂತೋಷ್, ತಾಲೂಕು ಕಾರ್ಯದರ್ಶಿ ಕುಮಾರ್, ತಾಲೂಕು ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಪ್ರತಿನಿಧಿಯಾಗಿ ಕೆ ನಾಗರಾಜ್ ಜವಾಬ್ದಾರಿ ಸ್ವೀಕರಿಸಿರುತ್ತಾರೆ. ಈ ಸಭೆಗೆ ವೀಕ್ಷಕರಾಗಿ ಜಿಲ್ಲಾ ಅಧ್ಯಕ್ಷರಾದ ಎನ್ ಚಂದ್ರಶೇಖರ್,ಕಾರ್ಯಾಧ್ಯಕ್ಷರಾದ ಎನ್, ಶ್ರೀನಿವಾಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಡಿ. ಕುಮಾರ್ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















