Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ : ಅ. 23 ರಂದು ಅರ್ಹ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

---Advertisement---

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಭಾರತ ಚುನಾವಣಾ ಆಯೋಗವು ದ್ವೈವಾರ್ಷಿಕ ಚುನಾವಣೆಯನ್ನು ಘೋಷಿಸಿದ್ದು, ಮತದಾನದ ದಿನವಾದ 2026ರ ಅಕ್ಟೋಬರ್ 23ರ ಶುಕ್ರವಾರದಂದು ಅರ್ಹ ಮತದಾರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಆಗ್ನೇಯ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಗಳು, ಹಾಗೆಯೇ ಕರ್ನಾಟಕ ಈಶಾನ್ಯ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಅರ್ಹ ಪದವೀಧರ ಮತ್ತು ಶಿಕ್ಷಕ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಈ ರಜೆ ಘೋಷಿಸಲಾಗಿದೆ.

ಮತದಾನದಲ್ಲಿ ಭಾಗವಹಿಸಲು ಇಚ್ಛಿಸುವ ಮತದಾರರು ಪೂರ್ವಾನುಮತಿಯನ್ನು ಪಡೆಯುವ ಷರತ್ತಿಗೆ ಒಳಪಟ್ಟು, ಸಂಬಂಧಪಟ್ಟ ಅಧಿಕಾರವುಳ್ಳ ಪ್ರಾಧಿಕಾರಗಳು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ) ತಿಳಿಸಿದ್ದಾರೆ.

Join WhatsApp

Join Now

Join Telegram

Join Now