ಚಿತ್ರದುರ್ಗ.ಡಿ.29: ಜಿಲ್ಲೆಯಲ್ಲಿ ಜರುಗುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಚುನಾವಣಾ ಆಯೋಗದ ಸೂಚನೆಯಂತೆ ಸೂಪರ್ ಚೆಕ್ ನಡೆಸುವ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶುಕ್ರವಾರ ನಗರದ ವಿವಿಧ ಮತಗಟ್ಟೆಗಳಿಗೆ ಹಾಗೂ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾಧಿಕಾರಿಗಳು ವಿವಿಧ ಮತಗಟ್ಟೆಗಳಿಗೆ ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ಕೈಗೊಂಡರು. ಇದರ ಅಂಗವಾಗಿ, ನಗರದ ಚೇಳುಗುಡ್ಡ, ಬುರುಜನಹಟ್ಟಿ, ರಂಗಯ್ಯನಬಾಗಿಲು ಸೇರಿದಂತೆ ವಿವಿಧ ಪ್ರದೇಶಗಳ ಮತಗಟ್ಟೆಗಳಿಗೆ ಹಾಗೂ ಈ ವ್ಯಾಪ್ತಿಯ ಮನೆಗಳಿಗೆ ಖುದ್ದು ಭೇಟಿ ನೀಡಿದ ಅವರು, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ, ನಿಷ್ಕ್ರಮಣೆ (ಡಿಲೀಟ್) ಕುರಿತು ಮತಗಟ್ಟೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮತದಾರ ಪಟ್ಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ಬದಲಾವಣೆಗಾಗಿ ಅರ್ಜಿ ಸಲ್ಲಿಸಿದ ಫಾರಂ-6 ಹಾಗೂ 7 ಅರ್ಜಿಗಳ ಮೇಲ್ವಿಚಾರಣೆ ನಡೆಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಸೇರಿದಂತೆ ವಿವಿಧ ಸಿಬ್ಬಂದಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















