Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ರಸ್ತೆಗೆ ಬಾಗಿದ ವಿದ್ಯುತ್ ಕಂಬ: ಸಾರ್ವಜನಿಕರಲ್ಲಿ ಆತಂಕ, ಬದಲಾಯಿಸಲು ಒತ್ತಾಯ

---Advertisement---

 

 

ಸುದ್ದಿಒನ್,ಚಿತ್ರದುರ್ಗ,ಮೇ.31: ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ವಿದ್ಯುತ್ ಕಂಬವೊಂದು ತೀವ್ರವಾಗಿ ಬಾಗಿದ್ದು, ಯಾವುದೇ ಕ್ಷಣದಲ್ಲಾದರೂ ಮುರಿದು ಬೀಳುವ ಆತಂಕ ಎದುರಾಗಿದೆ.

ಗ್ರಾಮದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಶಿಕ್ಷಕರಾದ ಹೇಮಾರೆಡ್ಡಿ ಅವರ ಮನೆಯ ಪಕ್ಕದಲ್ಲೇ ಈ ವಿದ್ಯುತ್ ಕಂಬವಿದ್ದು, ಇದು ಅಪಾಯಕಾರಿ ಸ್ಥಿತಿಯಲ್ಲಿ ವಾಲಿ ನಿಂತಿದೆ. ಈ ಕಂಬ ನೆಟ್ಟು ಸುಮಾರು 60 ಕ್ಕಿಂತ ಹೆಚ್ಚು ವರ್ಷಗಳಾಗಿರಬಹುದು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದೇ ರೀತಿ ಆಂಜನೇಯ ಸ್ವಾಮಿ ದೇವಾಲಯದ ಎದುರುಗಡೆ ಅಂಜಿನಪ್ಪ ಅವರ ಮನೆ ಮುಂಭಾಗದಲ್ಲಿ ವಾಲಿದ್ದ ಕಂಬವೊಂದು ಇತ್ತೀಚೆಗೆ ಬಾರಿ ಗಾಳಿ ಮಳೆಗೆ ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಈ ರಸ್ತೆಯಲ್ಲಿ  ನಿರಂತರವಾಗಿ ಸಾರ್ವಜನಿಕರು ಹಾಗೂ ವಾಹನಗಳು ಸಂಚರಿಸುವ ಈ ಮುಖ್ಯ ರಸ್ತೆಯಲ್ಲಿ ಕಂಬ ಇಷ್ಟೊಂದು ಬಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮನೆಯ ಪಕ್ಕದಲ್ಲೇ ಇರುವ ವಿದ್ಯುತ್ ಕಂಬ ತುಂಬಾ ಬಾಗಿದೆ. ಇದರಿಂದ ಯಾವಾಗ ಏನಾಗುತ್ತೋ ಎಂಬ ಭಯದಲ್ಲೇ ಬದುಕುವಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಬಾಗಿರುವ ಈ ಹಳೆಯ ಕಂಬವನ್ನು ತೆರವುಗೊಳಿಸಿ ಹೊಸ ವಿದ್ಯುತ್ ಕಂಬವನ್ನು ಅಳವಡಿಸಬೇಕು ಗ್ರಾಮಸ್ಥರು ಈ ಮೂಲಕ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now