Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾ.ಬಿ.ಆರ್.ಅಂಬೇಡ್ಕರ್‌ರವರ ಆದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಎಂ.ಎ.ಸೇತೂರಾಂ ಕರೆ. 

Facebook
Twitter
Telegram
WhatsApp

ಚಿತ್ರದುರ್ಗ : ಬಾಲ್ಯದಲ್ಲಿಯೇ ಕಷ್ಟ, ಹಿಂಸೆ, ಅವಮಾನ, ಅಸ್ಪೃಶ್ಯತೆ ಯನ್ನು ಅನುಭವಿಸಿ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆಂದು ಬಿಜೆಪಿ.ಮುಖಂಡ ಎಂ.ಎ.ಸೇತೂರಾಂ ಹೇಳಿದರು.

ಮಾದಿಗ ಯುವ ಸೇನೆಯಿಂದ ಪತ್ರಕರ್ತರ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ ಚಿಂತನೆಗಳು ಮತ್ತು ಪ್ರಸ್ತುತ ರಾಜಕೀಯ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್‍ರವರು ಕೇವಲ ದಲಿತರಿಗಷ್ಟೆ ಸಂವಿಧಾನವನ್ನು ರಚಿಸಿಲ್ಲ. ಭಾರತದಲ್ಲಿರುವ ಎಲ್ಲಾ ಜಾತಿ ಧರ್ಮದವರಿಗೂ ಸಂವಿಧಾನದಲ್ಲಿ ಸಮಾನತೆಯನ್ನು ನೀಡಿದ್ದಾರೆ. ಅವರ ಆದರ್ಶ, ಮೌಲ್ಯಗಳನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು.

ದಲಿತರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಸದಾ ಸಾಮಾಜಿಕ ನ್ಯಾಯದ ಪರವಾಗಿರಿ. ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಿ. ಆಸೆ, ಆಮಿಷಗಳಿಗೆ ಬಲಿಯಾಗಿ ಮತಗಳನ್ನು ಮಾರಿಕೊಳ್ಳಬೇಡಿ. ಡಾ.ಬಿ.ಆರ್.ಅಂಬೇಡ್ಕರ್‍ರವರು ನೀಡಿರುವ ಸಂವಿಧಾನದ ಮೀಸಲಾತಿಯನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬನ್ನಿ ಎಂದು ದಲಿತರಿಗೆ ತಿಳಿಸಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ರಾಜ್ಯಾಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡಿ ಸಮಾನತೆ, ಸಹಭಾಳ್ವೆ, ಸಹೋದರತ್ವ ಡಾ.ಬಿ.ಆರ್.ಅಂಬೇಡ್ಕರ್‍ರವರ ಚಿಂತನೆಯಾಗಿತ್ತು. ಇಂದಿನ ರಾಜಕಾರಣವನ್ನು ಅಂಬೇಡ್ಕರ್‍ರವರಿಗೆ ಹೋಲಿಸಿ ಮಾತನಾಡುವುದು ದೊಡ್ಡ ಅಪರಾಧ. ಅವರ ಚಿಂತನೆಗಳ ಮೇಲೆ ದೇಶ ಕಟ್ಟಬೇಕಿದೆ. ಅಂಬೇಡ್ಕರ್‍ರವರ ವಿಚಾರಗಳು ದೇಶಕ್ಕೆ ಬುನಾದಿಯಿದ್ದಂತೆ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕೋಮುವಾದಿಗಳು ಸಂವಿಧಾನವನ್ನು ತೆಗೆದು ಹಾಕುವ, ತಿದ್ದುಪಡಿ ಮಾಡುವ ಹುನ್ನಾರ ನಡೆಸುತ್ತಿರುವುದರ ವಿರುದ್ದ ದಲಿತರು ಜಾಗೃತರಾಗಬೇಕಿದೆ ಎಂದು ಮನವಿ ಮಾಡಿದರು.

ಅಲ್ಲಲ್ಲಿ ಅಂಬೇಡ್ಕರ್‌ರವರ ಪ್ರತಿಮೆಗೆ ಅವಮಾನ ಮಾಡಲಾಗುತ್ತಿದೆ. ಒಟ್ಟಾರೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ದಿನಕ್ಕೊಂದು ಸಮಸ್ಯೆಗಳನ್ನು ಹುಟ್ಟುಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಬಿಜೆಪಿ.ಯವರಿಂದ ದಲಿತರ ಶೋಷಣೆ, ದಬ್ಬಾಳಿಕೆ, ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಮೂಡಲಗಿರಿಯಪ್ಪ ಮಾತನಾಡುತ್ತ ಸಂವಿಧಾನ ತಿದ್ದುಪಡಿ, ಬದಲಾವಣೆ ಮಾಡುತ್ತೇವೆಂದು ಹೇಳುತ್ತಿರುವವರು ಮೊದಲು ಬದಲಾವಣೆಯಾಗಬೇಕು. ಆಗ ಮಾತ್ರ ಡಾ.ಬಿ.ಆರ್.ಅಂಬೇಡ್ಕರ್‌ರವರು ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನ ಉಳಿಯಲು ಸಾಧ್ಯ ಎಂದರು.

ದಲಿತ ಮುಖಂಡ ಬಿ.ರಾಜಪ್ಪ ಮಾತನಾಡಿ ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್‍ರವರ ಮೂಲ ಮಂತ್ರವಾಗಿತ್ತು. ಹಾಗಾಗಿ ದಲಿತರು ಶಿಕ್ಷಣವಂತರಾಗುವ ಮೂಲಕ ಸಂವಿಧಾನದಲ್ಲಿರುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಬುದ್ದ, ಬಸವ, ಅಂಬೇಡ್ಕರ್, ಕಾನ್ಷಿರಾಂ, ಜ್ಯೋತಿಬಾಪುಲೆ, ಕೃಷ್ಣಪ್ಪ, ಮಂದಕೃಷ್ಣ ಮಾದಿಗ, ಸಾವಿತ್ರಿಬಾಯಿಪುಲೆ, ಕನಕದಾಸ ಇವರುಗಳೆಲ್ಲಾ ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದಿದ್ದರೂ ದಲಿತರ ಮೇಲೆ ಶೋಷಣೆ, ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ಇನ್ನು ನಿಂತಿಲ್ಲ. ಮೇಲ್ವರ್ಗದ ಕೈಗೆ ಅಧಿಕಾರ ಸಿಕ್ಕಿರುವುದರಿಂದ ಸಂವಿಧಾನವನ್ನು ಬದಲಾಯಿಸಲು ಹೊರಟಿರುವುದು ದೇಶಕ್ಕೆ ಬಹುದೊಡ್ಡ ಗಂಡಾಂತರ ಎನ್ನುವುದನ್ನು ದಲಿತರು ಮರೆಯಬಾರದು ಎಂದು ಎಚ್ಚರಿಸಿದರು.

2023 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ದಲಿತರ ಪರವಾಗಿರುವವರಿಗೆ ಮತಹಾಕಿ. ಯಾವುದೇ ಕಾರಣಕ್ಕೂ ನಿಮ್ಮ ಮತಗಳನ್ನು ಹಣಕ್ಕೆ ಮಾರಿಕೊಳ್ಳಬೇಡಿ. ಒಂದು ವೇಳೆ ಆಸೆ, ಆಮಿಷಗಳಿಗೆ ಮಾರು ಹೋಗಿ ಮತಗಳನ್ನು ಮಾರಿಕೊಂಡರೆ ಮತ್ತೆ ನಿಮ್ಮ ಶೋಷಣೆ ತಪ್ಪಿದ್ದಲ್ಲ. ಎಚ್ಚರಿಕೆಯಿಂದ ಮತದಾನ ಮಾಡಿ ಎಂದು ದಲಿತರಲ್ಲಿ ವಿನಂತಿಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಜಣ್ಣ ಲಕ್ಷ್ಮಿಸಾಗರ, ಮಹಾಲಿಂಗಪ್ಪ ಕುಂಚಿಗನಹಾಳ್, ಮಾದಿಗ ಯುವ ಸೇನೆ ಜಿಲ್ಲಾಧ್ಯಕ್ಷ ರಾಜಪ್ಪ ವೇದಿಕೆಯಲ್ಲಿದ್ದರು.
ಕೆ.ರುದ್ರಮುನಿ ಪ್ರಾರ್ಥಿಸಿದರು. ಮುಕೇಶ್ ಸ್ವಾಗತಿಸಿದರು. ಗಿರೀಶ್ ನಿರೂಪಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!