Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ಫೋನ್ ಗೆ ಎಮರ್ಜೆನ್ಸಿ ಅಲರ್ಟ್ ಬಂತ : ಗಾಬರಿ ಆಗ್ಬೇಡಿ

---Advertisement---

ಬೆಂಗಳೂರು: ಕೆಲ ಸಮಯದ ಹಿಂದಷ್ಟೇ ಎಲ್ಲರ ಮೊಬೈಲ್ ಒಂದೇ ಸಲಕ್ಕೆ ಅಲರ್ಟ್ ಸೌಂಡ್ ಮಾಡೋದಕ್ಕೆ ಶುರು ಮಾಡಿತ್ತು. ಎಲ್ಲರೂ ಇದನ್ನ ಕೇಳಿ ಒಂದು ಕ್ಷಣ ಗಾಬರಿಯಾಗಿದ್ದಂತು ನಿಜ ಅಲ್ವಾ. ಆದರೆ ಭಾರತ ಸರ್ಕಾರ ನೀಡಿದ ಈ ಅಲರ್ಟ್ ಬಗ್ಗೆ ಭಯ ಬೇಡ, ಎಚ್ವರಿಕೆ ಇರಲಿ. ಇದು ಕೇಂದ್ರ ಸರ್ಕಾರ ತಂದಿರುವ ಸೆಲ್ ಬ್ರಾಡ್ ಕಾಸ್ಟ್ ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಹೀಗಾಗಿ ಎಲ್ಲರ ಮೊಬೈಲ್ ಗೂ ಒಂದೇ ಸಮಯಕ್ಕೆ ಅಲರ್ಟ್ ಬಂದಿದೆ.

ಹಾಗಾದ್ರೆ ಈ ಅಲರ್ಟ್ ವಿಶೇಷತೆ ಏನು ಎಂಬುದನ್ನ ನೋಡೋದಾದ್ರೆ ಇದು ತುರ್ತು ಸಂದೇಶವಾಗಿರುವ ಕಾರಣ, ಫೋನ್ ಯಾವುದೇ ಸ್ಥಿತಿಯಲ್ಲಿದ್ದರೂ ಜೋರಾದ ಸೈರನ್ ಮೂಲಕ ನಿಮ್ಮ ಗಮನ ಸೆಳೆಯುತ್ತದೆ. ಕನ್ನಡ ಸೇರಿದಂತೆ ಸುಮಾರು 19ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ ಈ ಸಂದೇಶಗಳನ್ನು ಕಳುಹಿಸುವ ಸಾಮರ್ಥ್ಯವನ್ನು ಹೊಂದಿದೆ. ಈಗ ಬಂದಿರುವುದು ಕೇವಲ ಪರೀಕ್ಷಾರ್ಥ ಸಂದೇಶ. ಇದಕ್ಕಾಗಿ ನೀವೂ ಯಾವುದೇ ಆತಂಕ ಪಡುವ ಅಗತ್ಯವಿಲ್ಲ.

ಈ ತಂತ್ರಜ್ಞಾನವನ್ನು ದೂರಸಂಪರ್ಕ ಇಲಾಖೆ ಮತ್ತು ಸಿ ಡಾಟ್ ಸಂಸ್ಥೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ಇದು ಇಂಟರ್ನೆಟ್ ಅಥವಾ ನೆಟ್ವರ್ಕ್ ದಟ್ಟಣೆಯ ಮೇಲೆ ಅವಲಂಬಿತವಾಗಿಲ್ಲ. ಬದಲಾಗಿ ನಿರ್ದಿಷ್ಟ ಪ್ರದೇಶದ ಎಲ್ಲಾ‌ ಮೊಬೈಲ್ ಟವರ್ ಮೂಲಕ ಏಕಕಾಲದಲ್ಲಿ ಸಂದೇಶಗಳನ್ನು ರವಾನಿಸುತ್ತದೆ. ಭೂಕಂಪ, ಸುನಾಮಿ, ಚಂಡಮಾರುತ, ಮೊಂಚು ಅಥವಾ ಅನಿಲ ಸೋರಿಕೆಯಂತಹ ತುರ್ತು ಸಂದರ್ಭಗಳಲ್ಲಿ ಜನರನ್ನು ಕೇವಲ ಸೆಕೆಂಡುಗಳಲ್ಲಿ ಎಚ್ಚರಿಸಿ, ಸುರಕ್ಷಿತ ಸ್ಥಳಕ್ಕ ತೆರಳಲು ಸಮಯ ನೀಡುವ ಉದ್ದೇಶದಿಂದ ಈ ತಂತ್ರಜ್ಞಾನವನ್ನು ಅಪ್ಡೇಟ್ ಮಾಡಲಾಗುತ್ತಿದೆ. ಹೀಗಾಗಿ ಯಾರೂ ಗಾಬರಿಯಾಗಬೇಡಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...