ಬೆಂಗಳೂರು; ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘಗಳಿಗೆ ಒತ್ತು ನೀಡಲಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ನೀಡಿದೆ
ಆ ಯೋಜನೆಗೆ 2025-26ನೇ ಸಾಲಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಮಹಿಳಾ ಸಬಲೀಕರಣಕ್ಕಾಗಿಯೇ ಇನ್ನು ಹಲವು ಯೋಜನೆಗಳನ್ನ ನೀಡಲಾಗಿದೆ. ಅದರಲ್ಲಿ ಅಕ್ಕ ಕೋ ಆಪರೇಟಿವ್ ಸಿಸೈಟಿ, ಅಕ್ಕ ಕ್ಯಾಂಟಿನ್ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟಿನ್ ಗಳನ್ನ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯವ್ಯಾಪಿ ಅಕ್ಕ ಕ್ಯಾಂಟಿನ್ ಗಳನ್ನು ಸ್ಥಾಪಿಅಉವ ಯೋಜನೆ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್ನ ಗಾತ್ರ 4 ಲಕ್ಷ ಕೋಟಿ ರೂಗಿಂತ ತುಸು ಹೆಚ್ಚಿನದ್ದಾಗಿದೆ. 2024-25ರ ಬಜೆಟ್ 3,71,383 ಕೋಟಿ ರೂ ಗಾತ್ರದ್ದಾಗಿತ್ತು. ಈ ಬಾರಿ ಅದು 4,09,549 ಕೋಟಿ ರೂನಷ್ಟಿದೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ 38,166 ಕೋಟಿ ರೂನಷ್ಟು ಹೆಚ್ಚಳವಾಗಿದೆ. ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಮೀಸಲಿರಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ ನೀಡಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇವೆರಡು ಯೋಜನೆಗಳು ಮುಖ್ಯವಾಗಿದ್ದು ಹೆಚ್ಚಿನ ಅನುದಾನ ಬೇಡುತ್ತವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















