Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ : ಸಚಿವ ಡಿ.ಸುಧಾಕರ್

---Advertisement---

ಚಿತ್ರದುರ್ಗ. ಫೆ.17: ಕೃಷಿ ಚಟುವಟಿಕೆಗಳನ್ನು ಸ್ವಲ್ಪ ಕಡಿಮೆ ಮಾಡಿ ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು, ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕವಾಗಿ ಸಬಲರಾಗಲು ವಿಫುಲ ಅವಕಾಶಗಳಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ವಿ.ಪಿ.ಬಡಾವಣೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಸೋಮವಾರ ಆಯೋಜಿಸಿರುವ 32ನೇ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ತೋಟಗಾರಿಕೆ ಬೆಳೆಗಳಲ್ಲಿ ರಾಜ್ಯದಲ್ಲಿ ಕೋಲಾರ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದ್ದು, ಉತ್ತಮ ಆದಾಯಗಳಿಸುತ್ತಿದೆ. ಹಾಗಾಗಿ ಕೋಲಾರ ಜಿಲ್ಲೆಯ  ಮಾದರಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದರು.

ಜಿಲ್ಲೆಯ ಮಳೆ ವರದಿ ಅವಲೋಕಿಸಿದಾಗ  10 ವರ್ಷದಲ್ಲಿ 3 ವರ್ಷ ಮಾತ್ರ ಉತ್ತಮ ಮಳೆಯಾಗಲಿದೆ. ಇನ್ನೂ 7 ವರ್ಷ ಮಳೆ ಕಡಿಮೆಯಾಗಿದೆ. ಇದನ್ನು ಮನಗಂಡು ಜಿಲ್ಲೆಯ ರೈತರು ಹೆಚ್ಚು ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು-ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, 32ನೇ ಫಲ-ಪುಷ್ಪ ಪ್ರದರ್ಶನದಲ್ಲಿ ಹೆಣ್ಣಿಗೆ ಗೌರವ ಸೂಚಕ ಕಲಾಕೃತಿ, ಮಯೂರ ವರ್ಮ ಕಲಾಕೃತಿ, ಸ್ವಾವಲಂಬಿ ರೈತ, ವಾಣಿವಿಲಾಸ ಸಾಗರ ಅಣೆಕಟ್ಟಿನ ಕಲಾಕೃತಿ ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ಚಿತ್ರಕಲಾವಿದರ ಕಲಾಕೃತಿಗಳನು ಪ್ರದರ್ಶಿಸಲಾಗಿದೆ. ಮೂರು ದಿನಗಳ ಕಾಲ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಾಗೋಷ್ಠಿಗಳನ್ನು ನಡೆಸಲಾಗಿದೆ. ವಿಶೇಷವಾಗಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚಿಸಲಾಗಿದೆ ಎಂದರು.

ಜಿಲ್ಲೆಯ ಮಳೆಯಾಶ್ರಿತ ಪ್ರದೇಶದಲ್ಲಿರುವುದರಿಂದ ಅಂತರ್ಜಲದ ಕುರಿತು ಚರ್ಚಿಸಲಾಗಿದೆ. ಜೊತೆಗೆ ಸಾಂಸ್ಕøತಿಕ ಮನೋರಂಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಣ್ಣು ಮತ್ತು ತರಕಾರಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪ್ಯಾನ್ಸಿ ಡ್ರೆಸ್ ಸ್ಪರ್ಧೆ, ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ತೋಟಗಾರಿಕೆ ಸಂಘದ ಸಲಹಾ ಸಮಿತಿ ಅಧ್ಯಕ್ಷ ಜಿ.ಎಸ್.ಉಜ್ಜಿನಪ್ಪ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ದೀಪಾ ಭೀಮಪ್ಪ ಹೊಂಕಳಿ, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ಜಲತಜ್ಞ ದೇವರಾಜ ರೆಡ್ಡಿ, ತೋಟಗಾರಿಕೆ ಸಂಘದ ಪದಾಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment