ಚಿತ್ರದುರ್ಗ, (ನ. 13) : ಸ್ಥಳೀಯ ಲೆಕ್ಕಪರಿಶೋಧನೆ ವರ್ತುಲ ಕಚೇರಿಯ ನೂತನ ಕಟ್ಟಡಕ್ಕೆ ಬಾಕಿ ಉಳಿದ ರೂ.150.00 ಲಕ್ಷಗಳ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ನಗರದ ನೂತನ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ರನ್ನು ಭೇಟಿ ಮಾಡಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಅಧ್ಯಕ್ಷರಾದ ಕೆ.ಮಂಜುನಾಥ್, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಚಿತ್ರದುರ್ಗ ಕಚೇರಿಯ ಹಿರಿಯ ಉಪ ನಿರ್ದೇಶಕ ಸಿ.ಜಿ. ಶ್ರೀನಿವಾಸ ಮತ್ತು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಇತರೆ ಸಿಬ್ಬಂದಿ ಭಾಗವಹಿಸಿದ್ದರು.