ಉದ್ಯೋಗ ವಾರ್ತೆ | ಮೇ 27ರಂದು ನೇರ ಸಂದರ್ಶನ

1 Min Read

ಚಿತ್ರದುರ್ಗ, (ಮೇ.24) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿ.ಕಾಂ, ಬಿ.ಎಸ್ಸಿ ಮತ್ತು ಇತರೆ ಪದವೀಧರರು ಅಗತ್ಯ ದಾಖಲೆಗಳಾದ 6 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು, ಫೋಟೋಸ್, ಆಧಾರ್‍ಕಾರ್ಡ್‍ನೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ 8105619020, 8310785143, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *