Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ ಜಾರಿ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಸಲುವಾಗಿ ಜಾರಿಗೆ ತರಲಾಗಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ–2021 ಮಸೂದೆಗೆ ರಾಜ್ಯಪಾಲ ಥಾವರ್​ ಚಂದ್‌ ಗೆಹ್ಲೋಟ್​​​ ಅಂಕಿತ ಹಾಕಿದ್ದಾರೆ.

ಈ ಮೂಲಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು (ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರ, ಮಜರ್ ಇತರೆ) ಸಂರಕ್ಷಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಆದರೆ ತೆರವಿಗೆ ಸಂಬಂಧಪಟ್ಟಂತೆ ಯಾವುದೇ ಪ್ರಕರಣವು ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥದ ಹಂತದಲ್ಲಿದ್ದರೆ ಸಂರಕ್ಷಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರವು ಭವಿಷ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪರವಾನಗಿ ಇಲ್ಲದೆ ಅವಕಾಶ ನೀಡುವಂತೆ ಇಲ್ಲ. ಆದರೆ ಕಾನೂನು ಹಾಗೂ ಸರ್ಕಾರ ಆಗಾಗ ವಿಧಿಸುವ ಷರತ್ತುಗಳಿಗೆ ಒಳಪಟ್ಟಂತೆ ಸಂರಕ್ಷಿತ ಕಟ್ಟಡಗಳಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!