ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಸಲುವಾಗಿ ಜಾರಿಗೆ ತರಲಾಗಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ–2021 ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಈ ಮೂಲಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು (ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರ, ಮಜರ್ ಇತರೆ) ಸಂರಕ್ಷಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಆದರೆ ತೆರವಿಗೆ ಸಂಬಂಧಪಟ್ಟಂತೆ ಯಾವುದೇ ಪ್ರಕರಣವು ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥದ ಹಂತದಲ್ಲಿದ್ದರೆ ಸಂರಕ್ಷಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರವು ಭವಿಷ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪರವಾನಗಿ ಇಲ್ಲದೆ ಅವಕಾಶ ನೀಡುವಂತೆ ಇಲ್ಲ. ಆದರೆ ಕಾನೂನು ಹಾಗೂ ಸರ್ಕಾರ ಆಗಾಗ ವಿಧಿಸುವ ಷರತ್ತುಗಳಿಗೆ ಒಳಪಟ್ಟಂತೆ ಸಂರಕ್ಷಿತ ಕಟ್ಟಡಗಳಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬಹುದು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…