Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು : ಶಾಸಕ ಸಿಪಿ ಯೋಗೀಶ್ವರ್

---Advertisement---

ರಾಮನಗರ: ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸುವವರು ಹೆಚ್ಚಾಗಿದ್ದಾರೆ. ಬಹಿರಂಗವಾಗಿಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂದು ಹೇಳಿಕೆ ನೀಡ್ತಾ ಇದ್ದಾರೆ. ಇದೀಗ ಆ ಸಾಲಿಗ ಶಾಸಕ ಸಿಪಿ ಯೋಗೀಶ್ವರ್ ಕೂಡ ಸೇರಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ನಮಗೆ ಸಾಕು ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಪಿ ಯೋಗೀಶ್ವರ್ ಅವರು, ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಆಸೆ. ಆದರೆ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ಧವಾಗಿರುತ್ತೇನೆ. ಜನಾಭಿಪ್ರಾಯ ಕೂಡ ಅದೇ ಆಗಿದೆ. ಕ್ಷೇತ್ರದ ಜನ ಕೂಡ ಅದನ್ನೇ ಬಯಸುತ್ತಿದ್ದಾರೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ನಾನು ಕೂಡ ಬಯಸುತ್ತೇನೆ. ಆದರೆ ನಮ್ಮ ಹೈಕಮಾಂಡ್ ಅದನ್ನೆಲ್ಲ ತೀರ್ನಾಮ ಮಾಡುತ್ತದೆ. ನಮ್ಮದೇನಿದ್ದರೂ ಅಭಿಪ್ರಾಯ ತಿಳಿಸುವುದಷ್ಟೇ. ನಾವೆಲ್ಲರೂ ಒಗ್ಗಟ್ಟಿನಿಂದ ಆ ಬಗ್ಗೆ ಹೇಳುತ್ತಿದ್ದೇವೆ ಎಂದಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೂ ಸಿಎಂ ಹುದ್ದೆಯನ್ನು ಅಲಂಕರಿಸುವ ಆಸೆಯೇ ಇರುವುದು. ಆದರೆ ಆ ಆಸೆ ಸದ್ಯಕ್ಕೆ ಈಡೇರುವ ಲಕ್ಷಣಗಳು ಕಾಣಿಸ್ತಿಲ್ಲ. ಆದರೂ ಪ್ರಯತ್ನವನ್ನ ಬಿಡ್ತಾ ಇಲ್ಲ. ಸರ್ಕಾರ ರಚನೆ ಆಗುವ ಸಮಯದಲ್ಲಿಯೇ 50-50 ಎಂದು ತೀರ್ಮಾನವಾಗಿತ್ತು ಎಂದೇ ಹೇಳಲಾಗಿತ್ತು. ಆದರೆ ಸರ್ಕಾರ ರಚನೆ ಆಗಿ ಎರಡೂವರೆ ವರ್ಷ ಆಗಿದೆ. ಹೀಗಾಗಿ ಸಿಎಂ ಬದಲಾವಣೆಯ ವಿಚಾರ ಹೆಚ್ಚು ಚರ್ಚೆಯಾಗ್ತಾ ಇದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿಯಲ್ಲಿ ಹುದ್ದೆಯೊಂದನ್ನ ನೀಡಿದ್ದಾರೆ. ಸಿಎಂ ಸ್ಥಾನ ಬಿಟ್ಟು, ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಎಂಬುದನ್ನ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment