ಚಿತ್ರದುರ್ಗ, ಜುಲೈ. 06: ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮತದಾರರ ಪಟ್ಟಿಗಳ ವೀಕ್ಷಕರು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮತದಾರರ ಗಣತಿ ನಮೂನೆಗಳನ್ನು ವಿತರಿಸಿರುವ ಕುರಿತು ಸಮಗ್ರವಾಗಿ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಹಾಗೂ ಮುಖ್ಯ ಯೋಜನಾಧಿಕಾರಿ ಸಿ. ಎಸ್. ಗಾಯತ್ರಿ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









