ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಸೆ. 23 : ರಾಜ್ಯ ಸರ್ಕಾರ ನಿನ್ನೆಯಿಂದ ಪ್ರಾರಂಭ ಮಾಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ನಮ್ಮ ಸಮುದಾಯದವರು ಜಾತಿ ಕಾಲಂನಲ್ಲಿ ಸವಿತಾ ಎಂದು ನಮೂದಿಸಿ, ಧರ್ಮ ಕಾಲಂನಲ್ಲಿ ಹಿಂದೂ ಎಂದು ನಮೂದಿಸುವಂತೆ ಸವಿತಾ ಸಮಾಜದ ಮುಖಂಡರಾದ ಎನ್.ಡಿ.ಕುಮಾರ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಸಮುದಾ ಯದವರು ಕ್ಷೌರಿಕ, ಡೋಲು ಬಾರಿಸುವುದು ನಾಟಿ ವೈದ್ಯರಾಗಿ ಕೆಲಸವನ್ನು ಮಾಡುತ್ತಿದ್ದಾರೆ. ಇವರೆಲ್ಲರು ಸಹಾ ಗಣತಿಗರ ಬಂದಾಗ ಸವಿತಾ ಎಂದು ಬರೆಸುವಂತೆ ಮನವಿ ಮಾಡಿದ್ದು, ಸರ್ಕಾರ ಗಣತಿ ಮಾಡುತ್ತಿರುವ ಬಗ್ಗೆ ನಮ್ಮ ಸಮುದಾಯಕ್ಕೆ ಮಾಹಿತಿ ಇಲ್ಲ ಇದರ ಬಗ್ಗೆ ತಿಳಿಸುವಂತ ಕಾರ್ಯವನ್ನು ನಮ್ಮ ಸಮಾಜದವತಿಯಿಂದ ಮಾಡಲಾಗುತ್ತದೆ. ನಮ್ಮಲ್ಲಿ ನೆರೆ ರಾಜ್ಯ ಆಂಧ್ರದಿಂದಲೂ ಸಹಾ ಬಹಳಷ್ಟು ಜನ ವಲಸೆ ಬಂದಿದ್ದಾರೆ ಇದ್ದಲ್ಲದೆ ನಮ್ಮಲ್ಲಿಯೇ ಬಹಳಷ್ಟು ಜನ ಇದ್ದಾರೆ ಈ ಹಿನ್ನೆಲೆಯಲ್ಲಿ ಭಾಷೆಯ ಬಗ್ಗೆ ಬರೆಯುವಾಗ ಕನ್ನಡ ಅಥವಾ ತೆಲುಗ ಎಂದು ಬರೆಸುವಂತೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕುರುಬರನ್ನು ಹಾಗೂ ಯಾದವರನ್ನು ಎಸ್.ಟಿ.ಗೆ ಸೇರಿಸಲು ಮುಂದಾಗಿದೆ ಇದೇ ರೀತಿ ನಮ್ಮ ಸಮುದಾಯವನ್ನು ಸಹಾ ರಾಜ್ಯ ಸರ್ಕಾರ ಎಸ್.ಸಿ.ಗೆ ಸೇರಿಸುವಂತೆ ಆಗ್ರಹಿಸಿದ್ದು ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸ್ ಮಾಡುವಂತೆ ಸರ್ಕಾರವನ್ನು ಕುಮಾರ್ ಆಗ್ರಹಿಸಿದ್ದಾರೆ.
ಸವಿತಾ ಸಮಾಜದ ರಾಜ್ಯ ಪ್ರತಿನಿಧಿಯಾದ ತಿಪ್ಪೇಸ್ವಾಮಿ ಸಂಪಿಗೆ ಮಾತನಾಡಿ, ನಮ್ಮ ಸಮುದಾಯದಲ್ಲಿ 27 ಉಪ ಪಂಗಡಗಳಿ ಇವೆ. ಇದನ್ನು ಬರೆಸುವ ಬದಲು ಎಲ್ಲರು ಸಹಾ ಸವಿತಾ ಎಂದು ಬರೆಯಿಸುವುದರ ಮೂಲಕ ನಮ್ಮ ಒಗ್ಗಟ್ಟನ್ನು ಪ್ರದರ್ಶನ ಮಾಡಬೇಕಿದೆ. ಇದರಿಂದ ಮುಂದಿನ ದಿನಮಾನದಲ್ಲಿ ಸರ್ಕಾರದ ವಿವಿಧ ರೀತಿಯ ಸೌಲಭ್ಯ ಹಾಗೂ ಮೀಸಲಾತಿಯನ್ನು ಪಡೆಯಲು ಅನುಕೂಲವಾಗುತ್ತದೆ ಎಂದಿದ್ದಾರೆ.
ಗೋಷ್ಟಿಯಲ್ಲಿ ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷರಾದ ಹನುಮಂತಪ್ಪ, ಗಾ,ನ ಲಿಂಗರಾಜು, ಹೊಳಲ್ಕೆರೆ ಅಧ್ಯಕ್ಷ ಗೀರೀಶ್, ಹಿರಿಯೂರು ಅಧ್ಯಕ್ಷ ಧನುಂಜಯ, ರಜತ್, ನಾಗರಾಜ್, ಘನಶ್ಯಾಂ, ದ್ಯಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











