ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಜಾತಿ ಸಮೀಕ್ಷೆಯಿಂದ ಯಾರು ವಂಚಿತರಾಗದೆ ಜಾತಿ ಕಾಲಂನಲ್ಲಿ ಅವರವರ ಪಂಗಡದ ಹೆಸರುಗಳನ್ನು ಕಡ್ಡಾಯವಾಗಿ ನಮೂದಿಸುವಂತೆ ಜವಳಿ ಅಭಿವೃದ್ದಿ ನಿಗಮದ ಮಾಜಿ ರಾಜ್ಯಾಧ್ಯಕ್ಷ ಗೋ.ತಿಪ್ಪೇಶ್ ಮನವಿ ಮಾಡಿದರು.
ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಸೌಲತ್ತುಗಳನ್ನು ಪಡೆಯಬೇಕಾಗಿರುವುದರಿಂದ ತಪ್ಪದೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ. ಪ್ರಧಾನವಾಗಿ ದೇವಾಂಗ, ಪದ್ಮಸಾಲಿ, ಪಟ್ಟಸಾಲಿ, ತೊಗಟವೀರ, ಕುರುಹಿನಶೆಟ್ಟಿ, ಸ್ವಕುಳಸಾಲಿ ಹಠಗಾರ ಹೀಗೆ 27 ಉಪ ಪಂಗಡಗಳಾಗಿ ವಿಭಜನೆಯಾಗಿದೆ. ಜಾತಿ ಕಾಲಂನಲ್ಲಿ ಅವರವರ ಪಂಗಡಗಳನ್ನು ನಮೂದಿಸಿ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು. ಇದರಿಂದ ಮೀಸಲಾತಿ ಪಡೆಯಲು ಅನಕೂಲವಾಗಲಿದೆ ಎಂದರು.
ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದ್ದು, ರಾಜ್ಯದಲ್ಲಿ 60 ಲಕ್ಷದಷ್ಟಿದ್ದೇವೆ. ಬಾಗಲಕೋಟೆ, ಬೆಂಗಳೂರು, ಗದಗ, ಬೆಂಗಳೂರಿನಲ್ಲಿ ಹೆಚ್ಚಿನ ಜನಸಂಖ್ಯೆಯಿದೆ. ಕುಲಕಸುಬು ಕಾಲಂನಲ್ಲಿ ನೇಕಾರಿಕೆ ಎಂದು ಬರೆಸಬೇಕು. ಜನರ ಮಾನ ಕಾಪಾಡುವ ಪವಿತ್ರ ವೃತ್ತಿ ನೇಕಾರಿಕೆಯಲ್ಲಿ ತೊಡಗಿರುವವರು ಸಮೀಕ್ಷೆಯಿಂದ ತಪ್ಪಿಸಿಕೊಳ್ಳಬೇಡಿ ಎಂದು ಗೋ.ತಿಪ್ಪೇಶ್ ವಿನಂತಿಸಿದರು.
ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಎಂ.ಗೋವಿಂದಪ್ಪ, ಕಾರ್ಯದರ್ಶಿ ಸುರೇಶ್, ಶಿವರುದ್ರಪ್ಪ, ಉಂಬಕ್ಕ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









