ರೈತರಿಗೆ ಉದ್ಯಮ ಶೀಲತೆ ಮತ್ತು ಕೌಶಾಲ್ಯಾಭಿವೃದ್ಧಿ ತರಬೇತಿ ಅರ್ಜಿ ಆಹ್ವಾನ

suddionenews
1 Min Read

ನಾಯಕನಹಟ್ಟಿ :  ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಬೆಂಗಳೂರು ಮತ್ತು ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‍ಮೆಂಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹೊಸ ಉದ್ಯಮ ಪ್ರಾರಂಭಿಸಲು ಆಸಕ್ತಿ ಇರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಉಳ್ಳ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಮತ್ತು ರೈತ ಕುಟುಂಬ ಹಿನ್ನೆಲೆ ಉಳ್ಳ ರೈತರಿಗೆ ಶೇಂಗಾ ಮತ್ತು ಸಿರಿ ಧಾನ್ಯಗಳ ಉತ್ಪನ್ನಗಳ ಉದ್ಯಮಶೀಲತೆ ಮತ್ತು ಕೌಶಾಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ದಿನಾಂಕ 28.11.2022 ರಿಂದ ದಿನಾಂಕ 03.12.2022 ರ ವರೆಗೆ ಭಾರತೀಯ ವಿಜ್ಞಾನ ಸಂಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 18 ರಿಂದ 40 ವರ್ಷದೊಳಗಿನ ಕನಿಷ್ಟ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವ ರೈತರು ದಿನಾಂಕ 17.11.2022 ರ ಒಳಗೆ ಕೆಳಗೆ ತಿಳಿಸಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಆನ್ ಲೈನ್ ನಲ್ಲಿಯೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ನೊಂದಾಯಿಸಿದ ನಂತರ ಸಂಸ್ಥೆಯು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. 21.11.2022 ರ ಒಳಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರವಾಗಿ ತರಬೇತಿಗೆ ಬರುವಂತೆ ತಿಳಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ತರಬೇತಿ ಸಮಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ  ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆಯು ಒದಗಿಸುತ್ತದೆ.

ಈ ಕಾರ್ಯಕ್ರಮ ಸಂಪೂರ್ಣ ಉಚಿತವಾಗಿದ್ದು, ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋರಲಾಗಿದೆ.

ನೋಂದಣಿಗಾಗಿ ಸಂಪರ್ಕಿಸಿ : 7349695100 (ಗಣೇಶ್) , 9663364234 (ಕೋಟೇಶ್).

Share This Article
Leave a Comment

Leave a Reply

Your email address will not be published. Required fields are marked *