ಫೋಟೋ ಮತ್ತು ವರದಿ ಕೃಪೆ
ಅರ್ಜಿತ್ ಗೋವಿಂಧನ್
9741738979
ಸುದ್ದಿಒನ್, ಚಿತ್ರದುರ್ಗ : ಇಂಧನ ಉಳಿತಾಯ, ಸರಳ ಜೀವನ, ಸ್ಥಳೀಯ ಉತ್ಪನ್ನಗಳ ಬಳಕೆ, ಗಾಂಧೀಜಿಯವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದರ ಮುಖಾಂತರ ಪರಿಸರ ಸಂರಕ್ಷಣೆ ಸಾಧ್ಯವೆಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಡಾ, ಎಚ್. ಕೆ.ಎಸ್.ಸ್ವಾಮಿ ತಿಳಿಸಿದರು.
ಅವರು ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ವತಿಯಿಂದ ಶುಕ್ರವಾರ ಜ್ಞಾನವಿಕಾಸ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂನ ಭಾಗವಾಗಿ ಯುವಜನಾಂಗವನ್ನು ಪರಿಸರ ಸಂರಕ್ಷಣೆಗಾಗಿ ಜಾಗೃತಗೊಳಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಸ್ಥಳೀಯ ಉತ್ಪನ್ನಗಳ ಬಳಕ ಹೆಚ್ಚಿಸಿ, ಜನರಲ್ಲಿ ದುಡಿಮೆಯ ಮಹತ್ವವನ್ನು ತಿಳಿಸಿ, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಪರಿಸರ ಸಂರಕ್ಷಣೆ ಮಾಡಿಕೊಳ್ಳವುದು ಸಹ ಒಂದು ವಿಧಾನ ಎಂದು ಚರಕದ ಪ್ರಾತ್ಯಕ್ಷಿಕೆಯ ಮುಖಾಂತರ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಜಿ. ಸುರೇಶ್ ರವರು ಪರಿಸರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದೆ ಅದನ್ನು ಸಂಗ್ರಹಿಸಿ, ವಿಂಗಡಿಸಿ ವಿಲೇವಾರಿ ಮಾಡಿ ಸೃಚ್ಛತೆಗೆ ಆಧ್ಯತೆ ನೀಡುತ್ತ ಪರಿಸರ ಸಂರಕ್ಷಣೆ ಮೂಲಕ ಜಾಗ್ರತಿ ಮೂಡಿಸಬೇಕೆಂದು ತಿಳಿಸಿದರು.
ಸಿವಿಲ್ ವಿಭಾಗದ ಮುಖ್ಯಸ್ಥ ಹರೀಶಯಾದವ್ ಎಸ್ ಜಿ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾಥಿ೯ಗಳು ಭಾಗವಹಿಸಿದ್ದರು..
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…