ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಜು.03) : ಸಮೃದ್ದ ಮಳೆ-ಬೆಳೆಯಾಗಿ ಪರಿಸರ ಹಚ್ಚ ಹಸಿರಿನಿಂದ ಕೂಡಿರಬೇಕಾದರೆ ಗಿಡ-ಮರಗಳನ್ನು ಬೆಳೆಸಬೇಕಿದೆ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹೇಳಿದರು.
ಅರಣ್ಯ ಇಲಾಖೆ ಚಿತ್ರದುರ್ಗ ಪ್ರಾದೇಶಿಕ ಸಾಮಾಜಿಕ ವಲಯದಿಂದ ಜು.1 ರಿಂದ 7 ರವರೆಗೆ ಹಮ್ಮಿಕೊಂಡಿರುವ ವನ ಮಹೋತ್ಸವ ನಿಮಿತ್ತ ಸೀಬಾರದ ಸಮೀಪವಿರುವ ಬಂಜಾರ ಗುರುಪೀಠದ ಆವರಣದಲ್ಲಿ ಗುರು ಪೂರ್ಣಿಮ ದಿನದ ಸೋಮವಾರ ಸಸಿಗಳನ್ನು ನೆಟ್ಟು ಮಾತನಾಡಿದ ಸ್ವಾಮೀಜಿ ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ. ಪರಿಸರ ಸಂರಕ್ಷಿಸುವುದು ಕೇವಲ ಅರಣ್ಯ ಇಲಾಖೆ ಕೆಲಸವಲ್ಲ. ಪ್ರತಿಯೊಬ್ಬರ ಜವಾಬ್ದಾರಿ ಎನ್ನುವ ಜಾಗೃತಿ ಎಲ್ಲರಲ್ಲೂ ಮೂಡಬೇಕಿದೆ ಎಂದು ತಿಳಿಸಿದರು.
ಶಿಕ್ಷಣ ಬೆಳೆದಂತೆಲ್ಲಾ ಪರಿಸರ ನಾಶವಾಗುತ್ತಿದೆ. ಹಿಂದಿನ ಕಾಲದಲ್ಲಿ ಹಿರಿಯರು ಗಿಡಗಳನ್ನು ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸುತ್ತಿದ್ದರು. ಕಾಲ-ಕಾಲಕ್ಕೆ ತಕ್ಕಂತೆ ಮಳೆಯಾಗಬೇಕಾದರೆ ಪರಿಸರ ಹಸಿರಿನಿಂದ ಕೂಡಿರಬೇಕು. ಆಗ ಮಾತ್ರ ಸಮೃದ್ದ ಬೆಳೆಯಾಗಿ ರೈತಾಪಿ ವರ್ಗ ಸೇರಿದಂತೆ ಸಕಲ ಜೀವರಾಶಿಗಳು ನೆಮ್ಮಿದಿಯಿಂದ ಬದುಕಲು ಸಾಧ್ಯ. ಇಷ್ಟೊತ್ತಿಗಾಗಲೆ ಸಾಕಷ್ಟು ಮಳೆಯಾಗಬೇಕಿತ್ತು. ಇನ್ನು ಬಾರದ ಕಾರಣ ದೇಶಕ್ಕೆ ಅನ್ನ ನೀಡುವ ರೈತ ಚಿಂತೆಗೊಳಗಾಗಿದ್ದಾನೆಂದು ವಿಷಾಧಿಸಿದರು.
ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ದುರ್ಗನಾಯ್ಕ ಮಾತನಾಡಿ ಪ್ರತಿ ವರ್ಷವು ಜೂ.5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಗುವುದು. ಅದರೆ ಅರಣ್ಯ ಇಲಾಖೆ ಏಳು ದಿನಗಳ ವನ ಮಹೋತ್ಸವ ಏರ್ಪಡಿಸಿರುವುದರಿಂದ ಇಲ್ಲಿ ಸಸಿಗಳನ್ನು ನೆಡಲಾಗುತ್ತಿದೆ. ಎಲ್ಲರೂ ಗಿಡ-ಮರಗಳನ್ನು ಬೆಳೆಸಿ ಪರಿಸರಕ್ಕೆ ಚಿಕ್ಕ ಕೊಡುಗೆಯನ್ನು ನೀಡಬೇಕೆಂದು ಮನವಿ ಮಾಡಿದರು.
ವಲಯ ಅರಣ್ಯಾಧಿಕಾರಿ ಉಷರಾಣಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ನುಗ್ಗೆ ಹಾಗೂ ಕರಿಬೇವು ಗಿಡಗಳನ್ನು ವಿತರಿಸಿ ಮಾತನಾಡುತ್ತ ಗಿಡಗಳನ್ನು ನೆಟ್ಟು ಪೋಷಿಸುವ ಹೊಣೆಗಾರಿಕೆ ನಿಮ್ಮದು. ಇನ್ನು ಎರಡು ಮೂರು ವರ್ಷಗಳಲ್ಲಿ ದೊಡ್ಡದಾಗಿ ಬೆಳೆದಿರಬೇಕು ಎಂದು ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಿದರು.
ಚಿತ್ರಡಾನ್‍ಬೋಸ್ಕೊ ನಿರ್ದೇಶಕ ಸ್ಟೀವನ್ ಲಾರೆನ್ಸ್, ಇಂದಿರಾಗಾಂಧಿ ವಸತಿ ಶಾಲೆಯ ಶಿಕ್ಷಕ ವಿಶ್ವಾಸ್, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರದೀಪ್ ಕೇಸರಿ, ಚೇತನ್‍ನಾಯ್ಕ, ಬೀಟ್ ಫಾರೆಸ್ಟರ್‍ಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊನ್ನೂರ್ ಅಲಿ ಈ ಸಂದರ್ಭದಲ್ಲಿ ಹಾಜರಿದ್ದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…