Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆರೆಗಳ ಸಂರಕ್ಷಣೆ ವಿಚಾರಕ್ಕೆ ಸರ್ಕಾರ ತೆಗೆದುಕೊಂಡ ಆ ಒಂದು ನಿರ್ಧಾರಕ್ಕೆ ಪರಿಸರವಾದಿಗಳಿಂದ ವಿರೋಧ..!

---Advertisement---

ಬೆಂಗಳೂರು: ಕೆರೆಗಳ ಸಂರಕ್ಷಣೆ ಮಾಡುವುದೆಂದರೆ ಒಂದಷ್ಟು ಅಭಿವೃದ್ಧಿಯಾದಂತೆಯೇ ಸರಿ. ಆದರೆ ಆ ಕೆರೆಗಳ ಸಂರಕ್ಷಣೆ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರವೊಂದು ಇದೀಗ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕೆರೆಗಳ ಸುತ್ತಲಿನ ಬಫರ್ ಝೋನ್ ಕಡಿಮೆ ಮಾಡುವ ಮಸೂದೆಗೆ ಅನುಮತಿ ಸಿಕ್ಕ ಹಿನ್ನೆಲೆ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವೂ ಕೆರೆಗಳ ಸುತ್ತಲಿನ ಬಫರ್ ಝೋನ್ ಅನ್ನು ಕಡಿಮೆ ಮಾಡುವ ಮಸೂದೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಮಸೂದೆ 2025ಕ್ಕೆ ರಾಜ್ಯದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಆದರೆ ಕೆರೆಗಳ ಸುತ್ತಲಿನ ಬಫರ್ ಝೋನ್ ಕಡಿಮೆ ಮಾಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪರಿಸರವಾದಿಗಳು ತೀವ್ರ ವಿರೋದ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ರಾಜ್ಯದ ಕೆರೆಗಳ ಭವಿಷ್ಯಕ್ಕಾಗಿ ರಜ್ಷಿಸಬೇಕಾದ ಸಂದರ್ಭದಲ್ಲಿ ಬಫರ್ ಜೋನ್ ಕಡಿಮೆ ಮಾಡುವುದು ಕೆರೆ ಸುತ್ತ ಕಮರ್ಷಿಯಲ್ ಮತ್ತು ಇಂಡಸ್ಟ್ರಿಯಲ್ ಚಟುವಟಿಕೆಗೆ ಅವಕಾಶ ಕೊಟ್ಟಂತೆ ಆಗುತ್ತೆ. ಇದರಿಂದ ಕೆರೆಯ ನೀರು ಕೂಡ ಕಲುಷಿತಗೊಳ್ಳುವ ಭಯ ಪರಿಸರವಾದಿಗಳನ್ನ ಕಾಡುತ್ತಿರುವ ಕಾರಣ ಆಜ್ಷೇಪ ವ್ಯಕ್ತಪಡಿಸಿದ್ದಾರೆ. ಹಾಗೇ ಈ ಮಸೂದೆಯಿಂದ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಎಲ್ಲಾ ರೀತಿಯ ಅನುಕೂಲ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಮಾಡಿದ್ದು, ಆಕ್ರೋಶ ಹೊರ ಹಾಕಿದ್ದಾರೆ. ಈ ಬಫರ್ ಜೋನ್ ಅಂದ್ರೆ, ಕೆರೆಯ ಸುತ್ತಲಿನ ಖಾಲಿ ಜಾಗ. ಈ ಜಾಗದಲ್ಲಿ ಪ್ರವಾಹ ನಿಯಂತ್ರಣ, ಪರಿಸರ ಸಂರಕ್ಷಣೆ ಮಾಡಲಾಗುತ್ತದೆ. ಬಪೊರ್ ಜೋನ್ ನಲ್ಲಿ ಯಾವುದೇ ಕಟ್ಟಡಗಳನ್ನು ಕಟ್ಟಲು ಅನುಮತಿ ಇಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment