ಬೆಳಗಾವಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಮೋದನೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಇದನ್ನ ವಿರೋಧಿಸುತ್ತಲೆ ಬಂದಿದೆ. ಇದೀಗ ಈ ಬಗ್ಗೆ ಮತ್ತೆ ಕಿಡಿಕಾರಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಅಭಿವೃದ್ಧಿ ಬಿಟ್ಟು ಜನ ವಿರೋಧಿ ಕಾಯ್ದೆ ತರಲು ಹೊರಟಿದ್ದಾರೆ ಎಂದು ಕೆಂಡಾಮಂಡಲಾರಾಗಿದ್ದಾರೆ.
ಕಲ್ಯಾಣ ಕರ್ನಾಟಕದ ವಿಚಾರವಾಗಿ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಕಲ್ಯಾಣ ಕರ್ನಾಟಕದ ವಿಚಾರವಾಗಿ ಪ್ರಶ್ನೆ ಕೇಳಿದರೆ ಚಕಾರ ಎತ್ತುತ್ತಿಲ್ಲ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯವಾಗುತ್ತೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ನಿರ್ಲಕ್ಷ್ಯ ಆಗುತ್ತಿದೆ.
ಕಾನೂನಾತ್ಮಕವಾಗಿ ಅಭಿವೃದ್ಧಿ ಮಂಡಳಿ ರಚನೆಯಾಗಿಲ್ಲ. ಅಭಿವೃದ್ಧಿ ಬಿಟ್ಟು ಜನವಿರೋಧಿ ಕಾಯ್ದೆ ತರಲು ಹೊರಟಿದ್ದಾರೆ. ಒಂದು ಸಮುದಾಯವನ್ನ ಗುರಿಯಾಗಿಸಿಟ್ಟುಕೊಂಡು ಕಾಯ್ದೆ ತರಲು ಮುಂದಾಗಿದ್ದಾರೆ. ಈಗಾಗಲೇ ಮತಾಂತರ ಕಾಯ್ದೆ ನಿಷೇಧ ರಾಜ್ಯದಲ್ಲಿ ಜಾರಿಯಿದೆ. ಇದೊಂದು ಜನ ವಿರೋಧಿ ಸರ್ಕಾರವಾಗಿದೆ ಎಂದು ಕಿಡಿಕಾರಿದ್ದಾರೆ.