Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪ್ಪ ಅಮ್ಮನಿಗೆ ಹುಟ್ಟಿರೋದು ಎಂಬ ಪ್ರಕಾಶ್ ರೈ ಹೇಳಿಕೆಗೆ ಅದು ಗ್ಯಾರಂಟಿನಾ ಎಂದು ಕೇಳಿದ ಈಶ್ವರಪ್ಪ..!

---Advertisement---

 

 

ಬಾಗಲಕೋಟೆ: ಸನಾತನ ಧರ್ಮದ ವಿಚಾರವಾಗಿ ಈಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಪ್ರಕಾಶ್ ರೈ ನೀಡಿದ ಒಂದು ಹೇಳಿಕೆಗೆ ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಗರಂ ಆಗಿದ್ದಾರೆ. ನಾನು ಸನಾತನ ಧರ್ಮಕ್ಕೆ ಹುಟ್ಟಿರೋದಲ್ಲ, ನಮ್ಮ ಅಪ್ಪ ಅಮ್ಮನಿಗೆ ಹುಟ್ಟಿರೋದು ಅಂತ ಪ್ರಕಾಶ್ ರೈ ಹೇಳಿದ್ದರು. ಅದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಈಶ್ವರಪ್ಪ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸದ್ಯ ಅದಾದರೂ ಗ್ಯಾರಂಟಿನಾ..? ನಮ್ಮ ಅಪ್ಪ ಯಾರೂ ಅಂತ ಅವರಮ್ಮನಿಗೆ ಕೇಳಿದ್ದಾನೋ ಇಲ್ವೋ ಗೊತ್ತಿಲ್ಲ. ಕೆಲವರು ಇಂಥವರಿಗೆ ನೇರವಾಗಿ ಹುಚ್ಚ ಅಂದರು ಇವರಿಗೆ ಬೇಜಾರು ಆಗಲ್ಲ. ಇವರು ಅಯೋಗ್ಯರು ಎಂದರು ಇವರಿಗೆ ಬೇಜಾರು ಆಗಲ್ಲ. ಅಂತವರ ಬಗ್ಗೆ ಮಾತನಾಡುವುದೇ ಬೇಡ ಎಂದಿದ್ದಾರೆ.

ಇನ್ನು ನಿನ್ನೆ‌ವಬೆಂಗಳೂರಿನಲ್ಲಿ ಗೌರಿ ನೆನಪು ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರಕಾಶ್ ರೈ ಕೂಡ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಟ್ವಿಟ್ಟರ್ ನಲ್ಲಿ ಸಮಾತನಿ ಸಂಸತ್ ಎಂದು ಟ್ವೀಟ್ ಮಾಡಿದ್ದೆ. ಅದಕ್ಕೆ ಒಬ್ಬ ಕೇಳಿದ ನೀನು ಸನಾತನ ಧರ್ಮ ಅಲ್ವಾ‌ ಎಂದು ಕೇಳಿದ. ಅದಕ್ಕೆ ನಾನು ಹೇಳಿದೆ‌ ನಾನು ಸನಾತನ ಧರ್ಮಕ್ಕೆ ಹುಟ್ಟಿದವನಲ್ಲ.‌ ನನ್ನ ಅಪ್ಪ ಅಮ್ಮನಿಗೆ ಹುಟ್ಟಿರೋದು ಎಂದು ಹೇಳಿದೆ ಎಂದರು. ಈ ಹೇಳಿಕೆ ಸಾಕಷ್ಟು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲೂ ಪ್ರಕಾಶ್ ವಿರುದ್ಧ ಹಲವರು ತಿರುಗಿ ಬಿದ್ದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment