ವರ್ಗಾವಣೆ ದಂಧೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ದೇವರ ಸನ್ನಿಧಿಗೆ ಕರೆದ ಈಶ್ವರಪ್ಪ..!

Facebook
Twitter
Telegram
WhatsApp

ಕೋಲಾರ: ಹೊಸ ಸರ್ಕಾರಗಳು ಬಂದಾಗ ವಿರೋಧ ಪಕ್ಷದವರು ಕೆಲವೊಂದು ಆರೋಪಗಳನ್ನು ಮಾಡುತ್ತಾರೆ. ಕಳೆದ ಬಾರಿ ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ನವರು ಕಮಿಷನ್ ಆರೋಪದ ವಿಚಾರಕ್ಕೆ ಪ್ರತಿಭಟನೆ ಮಾಡಿದ್ದರು. ಇದೀಗ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿ ನಾಯಕರು ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ.

ಇದೇ ವಿಚಾರಕ್ಕೆ ಮಾಜಿ ಸಚಿವ ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ದೇವರ ಸನ್ನಿಧಿಗೆ ಕರೆದಿದ್ದಾರೆ. ನೀವೂ, ನಿಮ್ಮ ಮಗ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ ಎಂದು ಗಣಪತಿ ದೇವಸ್ಥಾನದಲ್ಲಿ ಪ್ರಮಾಣ‌ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದ ಮೇಲೆ ಆರೋಪ ಮಾಡಿದ್ದವರು. ಆದರೆ ಈಗಿನ ಸರ್ಕಾರ ದಂಧೆಯಲ್ಲಿ ತೊಡಗಿದೆ. ಬೇಕಾದರೆ ಹಾಲಿ ಅಥವಾ ನಿವೃತ್ತ ಜಡ್ಜ್ ನೇಮಿಸಿ ತನಿಖೆ ನಡೆಸಲಿ ಎಂದಿದ್ದಾರೆ.

ಗಣಪತಿ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ. ಅದು ಸುಳ್ಳು ಎಂದಾದರೇ ಕುರುಡುಮಲೆ ಗಣಪತಿ ನನಗೆ ಏನು ಬೇಕಾದರೂ ಶಾಪ ನೀಡಲಿ. ಈಗಾಗಲೇ ವರ್ಗಾವಣೆ ದಂಧೆ ಶುರುವಾಗಿದೆ. ಎಲ್ಲಾ ವರ್ಗಾವಣೆಗಳು ಸಿದ್ದರಾಮಯ್ಯ ಅವರ ಗಮನಕ್ಕೆ ಬರಬೇಕಂತೆ. ಈ ರೀತಿ ಆದೇಶಿಸಿದ್ದಾರೆ. ವರ್ಗಾವಣೆ ದಂಧೆ ಸುಳ್ಳು ಆದರೆ ಗಣಪತಿ ದೇವಸ್ಥಾನಕ್ಕೆ ಬಂದು ಸಿದ್ದರಾಮಯ್ಯ ಅವರು ಪ್ರಮಾಣ ಮಾಡಲಿ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

error: Content is protected !!