Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಧಿಕಾರದ ಆಸೆಗೆ ಕಾಂಗ್ರೆಸ್ ನವರನ್ನು ಕರೆ ತಂದೆವು : ಈಶ್ವರಪ್ಪ ಆಶ್ಚರ್ಯಕರ ಹೇಳಿಕೆ..!

---Advertisement---

 

 

ಶಿವಮೊಗ್ಗ: ಕಳೆದ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿತ್ತು. ಆದ್ರೆ ಕೆಲವೇ ತಿಂಗಳಲ್ಲಿ ಆ ಸರ್ಕಾರ ಬಿದ್ದು ಹೋಯ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಸೇರಿಕೊಂಡು ಆ ಸರ್ಕಾರವನ್ನು ರಚಿಸಿದ್ರು. ಈ ಬಗ್ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾತನಾಡಿದ್ದು, ನಾವು ತಪ್ಪು ಮಾಡಿದ್ದೇವೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಆಸೆಗೆ ನಾವೂ ಕಾಂಗ್ರೆಸ್ ನವರನ್ನು ಕರೆದುಕೊಂಡು ಬಂದಿದ್ದೇವೆ. ಅಲ್ಲಿ ಬೇಸರ ಆಗಿ ನಾವೂ ಬರ್ತೀವಿ ಎಂದವರನ್ನು ಮಾತ್ರ ಕರೆದಿದ್ದು. ಅಲ್ಲಿಯ ತನಕ ನಾವಾಗಿ ನಾವೂ ಬನ್ನಿ ಎಂದು ಕರೆದಿಲ್ಲ. ಹದಿನೈದು ಜನ ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟು ಹರಿದುಬಂದ್ರು. ಕೊನೆಗೆ ಚುನಾವಣೆಗೆ ನಿಲ್ಲಿ ಗೆಲ್ಸಿ ಕೊಡ್ತೀವಿ ಅಂದ್ರು.‌ ಕಡೆಗೆ ಚುನಾವಣೆ ಹೇಗಾಯ್ತು, ಗೆಲುವು ಹೇಗೆ ಸಿಕ್ತು ಅದೆಲ್ಲವೂ ರಾಜ್ಯಕ್ಕೂ ಗೊತ್ತು. ನಾನು ಮಾತನಾಡಲ್ಲ ಎಂದಿದ್ದಾರೆ.

ನೈತಿಕತೆಯಿಂದ ರಾಜಕಾರಣ‌ ಮಾಡ್ತೀರಾ ಇವತ್ತಲ್ಲ ನಾಳೆ ಅಧಿಕಾರಕ್ಕೆ ಬರುತ್ತೆ. ಅಧಿಕಾರಕ್ಕೋಸ್ಕರ ಪಕ್ಷ ಈಗ ಮಾಡುತ್ತಾ ಇರುವುದು ನನಗೆ ಇಷ್ಟವಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಒಂದೇ ಒಂದು ದಿನದಲ್ಲಿ ಪ್ರಧಾನಮಂತ್ರಿ ಹುದ್ದೆ ಕಳೆದುಕೊಂಡರು. ಇದು ನಮ್ಮ‌ ಬಿಜೆಪಿಯ ವಿಶೇಷತೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment