Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ಸೆನ್‍ ಜನ್ಮದಿನಾಚರಣೆ ; ಪುಣ್ಯಭೂಮಿಯಲ್ಲಿ ಪುಷ್ಪ ನಮನ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ.09 : ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಸೀಬಾರ, ಚಿತ್ರದುರ್ಗ ತಾ| ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣ ರೂವಾರಿ, ಕರ್ನಾಟಕ ಶಿಲ್ಪಿ ಏಕೀಕೃತ ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿ ರಾಷ್ಟ್ರನಾಯಕ ಎಸ್. ನಿಜಲಿಂಗಪ್ಪ ಅವರ ನೂರಾ ಇಪ್ಪತ್ಮೂರನೇ ಜನ್ಮದಿನಾಚರಣೆಯು ಡಿ. 10ರ ಬುಧವಾರ ಬೆಳಗ್ಗೆ 10-30 ಘಂಟೆಗೆ ಸೀಬಾರದ ಎಸ್. ಎನ್ ಸ್ಮಾರಕದ ಅವರಣದ ಪುಣ್ಯಭೂಮಿಯಲ್ಲಿ ಪುಷ್ಪ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎನ್.ಟ್ರಸ್ಟ್‍ನ ಕಾರ್ಯದರ್ಶಿ ಹಾಗೂ ವಿಶ್ರಾಂತ ಮುಖ್ಯ ವಾಸ್ತುಶಿಲ್ಪಿಗಳಾದ ಪ್ರೊ: ಎಸ್.ಎನ್. ಕಿರಣ್ ಶಂಕರ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯೋಗವನ ಬೆಟ್ಟದ ಅಧ್ಯಕ್ಷರು, ಎಸ್.ಜೆ.ಎಂ. ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ|| ಬಸವಕುಮಾರ ಸ್ವಾಮಿಗಳು, ಮಾದಾರ ಚನ್ನಯ್ಯ ಗುರುಪೀಠ (ರಿ)ದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಮಾಜಿ ಸಂಸದರು, ಎಸ್.ಎನ್. ಮೆಮೋರಿಯಲ್ ಟ್ರಸ್ಟ್(ರಿ)ನ ಗೌರವ ಉಪಾಧ್ಯಕ್ಷರಾದ ಹೆಚ್. ಹನುಮಂತಪ್ಪ ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು, ಎಸ್.ಎನ್. ಮೆಮೋರಿಯಲ್ ಟ್ರಸ್ಟ್(ರಿ)ನ ಟ್ರಸ್ಟಿಗಳಾದ ಎಂ.ಕೆ. ತಾಜ್ ಪೀರ್ ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...