Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತ್ಯಾವಶ್ಯಕ, ತುರ್ತು ಕಾರ್ಯಚಟುವಟಿಕೆ ಹೊರತುಪಡಿಸಿ ಜನರ ಓಡಾಟ ನಿಷೇಧ: ಡಿಸಿ ಅನಿರುದ್ಧ ಶ್ರವಣ್

Facebook
Twitter
Telegram
WhatsApp

ಹೊಸಪೇಟೆ(ವಿಜಯನಗರ ಜಿಲ್ಲೆ),(ಜ.07): ವಿಜಯನಗರ ಜಿಲ್ಲೆಯಾದ್ಯಂತ ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಜಿಲ್ಲೆಯಲ್ಲಿ ತುರ್ತು, ಅತ್ಯಾವಶ್ಯಕ ಸೇವೆಗಳು  ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ/ಸಿಬ್ಬಂದಿಗೆ ಅನಿಬರ್ಂಧಿತ ಓಡಾಟಕ್ಕೆ ಅವಕಾಶ ನೀಡತಕ್ಕದ್ದು ಎಂದು ಅವರು ವಿವರಿಸಿದ್ದಾರೆ.

ಎಲ್ಲಾ ಸಾರ್ವಜನಿಕ ಉದ್ಯಾನಗಳು ಮುಚ್ಚಿರತಕ್ಕದ್ದು.ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ಕಫ್ರ್ಯೂನಿಂದ ವಿನಾಯಿತಿ ನೀಡಿದೆ. ನೌಕರರು ಆಯಾ ಸಂಘ/ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಲು ಅನುಮತಿಸುವುದಕ್ಕೆ ಅವರು ಸೂಚನೆ ನೀಡಿದ್ದಾರೆ.
ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು/ ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಕನಿಷ್ಠ ರುಜುವಾತನ್ನು ಹಾಜರುಪಡಿಸಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

*ಆಹಾರ, ದಿನಸಿ, ಹಣ್ಣು ಮತ್ತು ತರಕಾರಿ ಅಂಗಡಿಗಳ ಕಾರ್ಯನಿರ್ವಹಣೆಗೆ ಅನುಮತಿ:

ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಅನುಮತಿಸಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ.
ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24*7 ಅವಧಿಯಲ್ಲಿ ಸಾಮಗ್ರಿಗಳನ್ನು ಮನೆಮನೆಗೆ ವಿತರಿಸಲು (ಹೋಂ ಡೆಲಿವರಿ) ಪ್ರೋತ್ಸಾಹಿಸತಕ್ಕದ್ದು. ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಒಳಪಟ್ಟಿರತಕ್ಕದ್ದು ಎಂದು ಅವರು ತಿಳಿಸಿದ್ದಾರೆ.

ರೆಸ್ಟೋರೆಂಟ್ ಮತ್ತು ಹೋಟೇಲುಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಸತಕ್ಕದ್ದು. ರೈಲುಗಳ ಸಂಚಾರಕ್ಕೆ ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕಾಗಿ ವಿಮಾನ ನಿಲ್ದಾಣಗಳಿಗೆ, ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿಸುವ ಕ್ಯಾಬ್‍ಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಿಂಧುವಾದ ಪ್ರಯಾಣ ದಾಖಲೆ ಅಥವಾ ಟಿಕೇಟನ್ನು ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸುವ ಷರತ್ತಿಗೊಳಪಟ್ಟು ಮಾತ್ರವೇ ಅಂತಹ ಸಂಚಾರಕ್ಕೆ ಅನುಮತಿಸುವುದಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣ ಮಾಡಲು ಅನುಮತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್-19 ಸಮುಚಿತ ವರ್ತನೆಗಳನ್ನು ಹಾಗೂ ಅಸ್ತಿತ್ವದಲ್ಲಿರುವ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಹೋರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿಸಿದೆ ಎಂದು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!