Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆಯಲ್ಲಿ ವಿನೂತನ ವಿಶ್ವವಿದ್ಯಾಲಯ ಸ್ಥಾಪನೆ

Facebook
Twitter
Telegram
WhatsApp

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಘೋಷಣೆ ಮಾಡಿದ 2022-23ರ ಬಜೆಟ್ ನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಅದರಂತೆ ಈ ಬಾರಿ 7 ಜಿಲ್ಲೆಯಲ್ಲಿ ವಿನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.

ಅದರಂತೆ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆಯಲ್ಲಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ. ಐಐಟಿ ಮಾದರಿಯಲ್ಲೇ ಕೆಐಟಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನೋಡಿ ಕಲಿ ಮಾಡಿ ಕಲಿ ಯೋಜನೆಯಡಿ 169 ಬಾಲಕಿಯರ ಪ್ರೌಢಶಾಲೆಗಳಿಗೆ ಕಿಟ್ ವಿತರಣೆ ಮಾಡಲಾಗುವುದು. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ಅನುದಾನ ಮೀಸಲಿಡಲಾಗಿದೆ. ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪಿಠೋಪಕರಣ ಒದಗಿಸಲು 100 ಕೋಟಿ ಅನುದಾನ ಮೀಸಲಿಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗುವುದು. ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ ಮಾಡಲಯ ಅನುದಾನ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!