ವರದಿ ಮತ್ತು ಫೋಟೋ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಿರೇಗುಂಟನೂರು ಕಾರ್ಯಕ್ಷೇತ್ರದ ಚಂದನ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಸಿರಿಧಾನ್ಯಗಳ ಬಳಕೆ ಕುರಿತ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಯೋಜನಾಧಿಕಾರಿ ಪ್ರವೀಣ್ ಎ.ಜೆ.ಕಾರ್ಯಕ್ರಮ ಉದ್ಗಾಟಿಸಿ ಮಾತನಾಡುತ್ತ ಸಿರಿಧಾನ್ಯಗಳ ಬಳಕೆಯಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಬಹುದು. ಕೀಟನಾಶಕ ಹಾಗೂ ರಸಗೊಬ್ಬರಗಳನ್ನು ಬಳಸಿ ಬೆಳೆಯುವ ಆಹಾರ ಧಾನ್ಯಗಳ ಸೇವನೆಯಿಂದ ನಾನಾ ರೀತಿಯ ತೊಂದರೆಗಳನ್ನು ಅನುಭವಿಸುವುದು ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಿರಿಧಾನ್ಯಗಳನ್ನು ಬಳಸಿ ಆರೋಗ್ಯವಂತರಾಗಿರಿ. ಆರೋಗ್ಯವೇ ನಿಜವಾದ ಸಂಪತ್ತು ಎಂದು ಚಂದನ ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ಕರೆ ನೀಡಿದರು.
ಒಕ್ಕೂಟದ ಅಧ್ಯಕ್ಷೆ ಕಾವ್ಯ, ಉಮ, ಶಾಂತಲ, ಮಂಜುಳ, ಪ್ರೇಮ, ಚೈತ್ರ, ಮಂಜುಳ, ಚೈತನ್ಯ, ಅಭಿಷೇಕ್, ಸತೀಶ್, ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ, ಜ್ಞಾನವಿಕಾಸ ಕೇಂದ್ರದ ಎಲ್ಲಾ ಮಹಿಳಾ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.