Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ : ಎನ್.ಎಸ್.ಮಂಜುನಾಥ

---Advertisement---

 

ಚಿತ್ರದುರ್ಗ. ಜೂ.26: ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ನಿವೃತ್ತ  ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ  ಹೇಳಿದರು.

ನಗರದ ಅಮೃತ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಅಮೃತ್ ನರ್ಸಿಂಗ್ ಕಾಲೇಜು ಸಹಯೋಗದೊಂದಿಗೆ ವಿಶ್ವ ಮಾದಕದ್ರವ್ಯ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ವರ್ಷ ಜೂನ್ 26ರಂದು ವಿಶ್ವ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಸೆಪ್ಟೆಂಬರ್ 7, 1987 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಾದಕ ವಸ್ತುಗಳ ದುರುಪಯೋಗ ಮತ್ತು ಕಳ್ಳಸಾಗಾಣಿಕೆ ತಡೆಗಟ್ಟಲು ನಿರ್ದಿಷ್ಟ ಆಚರಣೆ ಜಾರಿಗೆ ತರಬೇಕು ಎಂದು ಒಂದು ನಿರ್ಣಯ ಅಂಗೀಕರಿಸಿತು. ಅದರಂತೆ ಪ್ರತ ವರ್ಷ ಜೂನ್ 26  ರಂದು ಅಕ್ರಮ ಮಾದಕ ವಸ್ತುಗಳ ಬಗ್ಗೆ ಮತ್ತು ಅವು ಸಮಾಜಕ್ಕೆ ತರುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ   ಅರಿವು ಮೂಡಿಸಲು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮಾನಸಿಕ ಆರೋಗ್ಯ ವಿಭಾಗದ ಮಾನಸಿಕ ತಜ್ಞ ಡಾ.ಶ್ರೀಧರ್ ಮಾತನಾಡಿ, ಈ ವರ್ಷದ ಘೋಷ ವಾಖ್ಯಾ “ಕೊಂಡಿಗಳನ್ನು ಕತ್ತರಿಸಿ, ತಡೆಗಟ್ಟುವಿಕೆ ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಬಲ ಪಡಿಸೋಣ ಎನ್ನುವುದಾಗಿದೆ ಎಂದು ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಗಾಯಿತ್ರಿ ಶಿವರಾಮ್ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆ ಸಮಾಜಮುಖಿಯಾಗಿ ಕಾರ್ಯ ಮೊದಲಿನಿಂದಲೂ ಮಾಡುತ್ತಾ ಬಂದಿದೆ. ಅದರಂತೆ ನಶಾ ಮುಕ್ತ ಸಮಾಜ ನಿರ್ಮಿಸಲು ಅರಿವು ಮೂಡಿಸಲು ಯೋಜನೆ ಸಿದ್ದಪಡಿಸಿ ಕಾರ್ಯೋನ್ಮುಖ ವಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ವಜಹತ್ತುಲ್ಲಾ ಮಾತನಾಡಿ, ಮೊದಲು ನೀವು ನಿಮ್ಮ ಕುಟುಂಬದ ಸದಸ್ಯರು ನಂತರ ಸಮುದಾಯದಲ್ಲಿ ವ್ಯಸನ ಮುಕ್ತ ಮಾಡಲು ಪ್ರಯತ್ನ ನಡೆಯಲಿ ಎಂದು ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ರೆಡ್ ಕ್ರಾಸ್ ಸಂಸ್ಥೆಯವರು ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎನ್.ಮಜಹರ್ ಉಲ್ಲಾ, ಸದಸ್ಯ ಶಿವರಾಮ್, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...