Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲರ ಚಿತ್ತ ವಯನಾಡು ಮತ್ತು ರಾಯ್ ಬರೇಲಿ ಕ್ಷೇತ್ರಗಳತ್ತ : ಈ ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ…!

Facebook
Twitter
Telegram
WhatsApp

ಸುದ್ದಿಒನ್ : ಚುನಾವಣಾ ಫಲಿತಾಂಶ ಬಂದಾಯ್ತು. ಎನ್‌ಡಿಎ ಸರ್ಕಾರವೂ ಅಧಿಕಾರಕ್ಕೆ ಬಂದಾಯ್ತು. ಈ ಎಲ್ಲಾ ಬೆಳವಣಿಗೆಯ ನಂತರ ಇದೀಗ ಎಲ್ಲರ ಚಿತ್ತ ಕೇರಳದ ವಯನಾಡು ಮತ್ತು ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರಗಳತ್ತ ನೆಟ್ಟಿದೆ.

ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಆ ಎರಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆ ಗೆದ್ದಿದ್ದಾರೆ. ಇವೆರಡರಲ್ಲಿ ಯಾವುದಾದರೂ ಒಂದು ಕ್ಷೇತ್ರವನ್ನು ರಾಹುಲ್ ಗಾಂಧಿ ಬಿಟ್ಟುಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಎರಡು ಸ್ಥಾನಗಳಲ್ಲಿ ರಾಹುಲ್ ಯಾವ ಕ್ಷೇತ್ರವನ್ನು ಬಿಟ್ಟುಕೊಡುತ್ತಾರೆ ಎಂಬ ವಿಷಯ ಕೆಲ ದಿನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಯ್ ಬರೇಲಿ ಅಥವಾ ವಯನಾಡ್ ಯಾವ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬುದೇ ಸದ್ಯದ ಬಹು ಚರ್ಚಿತ ವಿಷಯವಾಗಿದೆ. ಮೂಲಗಳ ಪ್ರಕಾರ ಅವರು ರಾಯ್ ಬರೇಲಿ ಕ್ಷೇತ್ರದ ಸಂಸದರಾಗಿ ಮುಂದುವರೆದು, ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ಹರಿದಾಡುತ್ತಿದೆ.  ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ಮೂಲಗಳು ತಿಳಿಸಿವೆ.
ಉತ್ತರಪ್ರದೇಶ ಮತ್ತು ಕಾಂಗ್ರೆಸ್ ಪಕ್ಷದ ರಾಜಕೀಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಬಂದಿದ್ದಾರೆಂದು ತಿಳಿದು ಬಂದಿದೆ.

ರಾಯ್ ಬರೇಲಿ ಕ್ಷೇತ್ರವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಸೋನಿಯಾ ಗಾಂಧಿ 2004 ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಸೋನಿಯಾ ಗಾಂಧಿ ಅವರು 2004, 2009, 2014 ಮತ್ತು 2019 ರಲ್ಲಿ ಸತತ ನಾಲ್ಕು ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದರು.
2024ರ ಚುನಾವಣೆಯಿಂದ ದೂರ ಉಳಿಯಲು ಸೋನಿಯಾ ಗಾಂಧಿ ನಿರ್ಧರಿಸಿದ್ದರು.

ರಾಯ್ ಬರೇಲಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ವದಂತಿಗಳೂ ಜೋರಾಗಿದ್ದವು. ಆದರೆ ತೀವ್ರ ಕಸರತ್ತಿನ ನಂತರ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಕಾಂಗ್ರೆಸ್ ನಾಯಕತ್ವ ತೆಗೆದುಕೊಂಡಿತ್ತು. ಆ ಮಟ್ಟಿಗೆ ಅಲ್ಲಿಂದಲೇ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಭಾರಿ ಬಹುಮತದಿಂದ ಗೆದ್ದಿದ್ದರು. ಈ ಹಿಂದೆ ಇಂದಿರಾ ಗಾಂಧಿ ಮತ್ತು ಫಿರೋಜ್ ಗಾಂಧಿ ಕೂಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಅವರ ಹೆಸರನ್ನು ಅಂತಿಮಗೊಳಿಸುವುದು ಔಪಚಾರಿಕವಾಗಿದೆ ಎಂಬ ಅಭಿಪ್ರಾಯವಿದೆ. ಈ ಬೆಳವಣಿಗೆಗಳು ಕೇರಳ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!