Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಹತ್ಯೆ : ರಾಜಕೀಯ ದ್ವೇಷದಿಂದ ಹತ್ಯೆಯಾಯ್ತಾ..?

---Advertisement---

ಕೋಲಾರ: ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಎಂ ಶ್ರೀನಿವಾಸ್ ಮೇಲೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರು ಜನರು ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಶ್ರೀನಿವಾಸಪುರದ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಮೃತ ಶ್ರೀನಿವಾಸ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿದ್ದರು. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಾಗಾರಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಟ್ಯಾಕ್ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ, ಅನಿಲ್ ಎಂಬುವವರನ್ನು ಕೊಲೆ ಮಾಡಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ.

ಇನ್ನು ಮೃತ ಶ್ರೀನಿವಾಸ್ ಪುರಸಭೆಯ ಮಾಜಿ ಅಧ್ಯಕ್ಷರಾಗಿ, ಎಪಿಎಂಸಿಯ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು‌. ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...