Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಕ್ತದಾನದಲ್ಲಿ ಮಾದರಿ ಸೇವೆ: ಚಿತ್ರದುರ್ಗದ ಕಾರ್ತಿಕ್‌ಗೆ ರಾಜ್ಯಮಟ್ಟದ ಗೌರವ

---Advertisement---

ಸುದ್ದಿಒನ್,  ಬೆಂಗಳೂರು, ಜೂನ್ 23: ರಕ್ತದಾನದ ಮೂಲಕ ಅನೇಕ ಜೀವಗಳನ್ನು ಉಳಿಸಲು ಮಹತ್ವದ ಕೊಡುಗೆ ನೀಡಿರುವ ಚಿತ್ರದುರ್ಗದ ಎಂ. ಕಾರ್ತಿಕ್ ಅವರಿಗೆ ಬೆಂಗಳೂರಿನಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಗಿದೆ.

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬೆಂಗಳೂರಿನ
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸೆಮಿನಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ತಿಕ್ ಅವರನ್ನು ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು. ಪ್ರತಿವರ್ಷ ರಾಜ್ಯದಲ್ಲಿ ಅತಿಹೆಚ್ಚು ಬಾರಿ ರಕ್ತದಾನ ಮಾಡಿದ 10 ಮಂದಿಯನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಚಿತ್ರದುರ್ಗ ಜಿಲ್ಲೆಯಿಂದ ಕಾರ್ತಿಕ್ ಆಯ್ಕೆಯಾಗಿರುವುದು ವಿಶೇಷವಾಗಿದೆ.

48 ವರ್ಷದ ಕಾರ್ತಿಕ್ ಇದುವರೆಗೆ 70 ಬಾರಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ್ದು, ಸಾವಿರಾರು ಜನರ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೆ, 3000ಕ್ಕೂ ಹೆಚ್ಚು ಮಂದಿಗೆ ರಕ್ತ ಪೂರೈಕೆಯಾಗುವಂತೆ ಸಮನ್ವಯ ಸಾಧಿಸಿ ನೆರವಾಗಿರುವುದು ಅವರ ಸಾಮಾಜಿಕ ಸೇವೆಯ ಮತ್ತೊಂದು ಪ್ರಮುಖ ಸಾಧನೆಯಾಗಿದೆ. ಈ ಅಮೂಲ್ಯ ಸೇವೆಯನ್ನು ಗುರುತಿಸಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಿರ್ದೇಶಕ ರಜನೀಶ್ ಶರ್ಮ ಉದ್ಘಾಟಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಮೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್, ಎಂಇಜಿ ಕೇಂದ್ರದ ಕರ್ನಲ್ ಪ್ರೊಸೆಂಜಿತ್ ದೇವ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಉಪಾಧ್ಯಕ್ಷ ಭಾಸ್ಕರ ರಾವ್ (ನಿವೃತ್ತ ಐಪಿಎಸ್), ಬನ್ನೂರು ರಾಜೀವ್ ಶೆಟ್ಟಿ, ಶ್ರೀನಿವಾಸ ಎಸ್. ಹ್ಯಾಟಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now