Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆಗಳಲ್ಲಿ 8ನೇ ತರಗತಿಗೂ ಇಂಗ್ಲಿಷ್ ಮಾಧ್ಯಮ ವಿಸ್ತರಣೆ; ಮಾಹಿತಿ ನೀಡಲು ಶಿಕ್ಷಣ ಇಲಾಖೆ ಸೂಚನೆ

---Advertisement---

ಸುದ್ದಿಒನ್, ಬೆಂಗಳೂರು ಮೇ.06: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, 2026-27ನೇ ಸಾಲಿನಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 8ನೇ ತರಗತಿಗೆ ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

2019-20ನೇ ಸಾಲಿನಲ್ಲಿ ರಾಜ್ಯದ ಸುಮಾರು 1000 ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದ (ದ್ವಿಭಾಷಾ ಮಾಧ್ಯಮ) ವಿಭಾಗಗಳನ್ನು ಆರಂಭಿಸಲಾಗಿತ್ತು. ಈ ಶಾಲೆಗಳಲ್ಲಿ ದಾಖಲಾದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ (2025-26) 7ನೇ ತರಗತಿಯನ್ನು ಪೂರೈಸಲಿದ್ದಾರೆ. ಈ ವಿದ್ಯಾರ್ಥಿಗಳ ಶೈಕ್ಷಣಿಕ ಮುಂದುವರಿಕೆಗಾಗಿ 2026-27ನೇ ಸಾಲಿನಲ್ಲಿ 8ನೇ ತರಗತಿಗೂ ಆಂಗ್ಲ ಮಾಧ್ಯಮವನ್ನು ವಿಸ್ತರಿಸುವುದು ಅನಿವಾರ್ಯವಾಗಿದೆ.

ನಾಲ್ಕು ಮಾದರಿಗಳಲ್ಲಿ ಮಾಹಿತಿ ಸಂಗ್ರಹ:

ಈ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ (ಆಡಳಿತ) ಸೂಚನೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಈ ಕೆಳಗಿನ ನಾಲ್ಕು ಮಾದರಿಗಳಲ್ಲಿ ಮಾಹಿತಿಯನ್ನು ಕ್ರೋಢೀಕರಿಸಿ ಸಲ್ಲಿಸಲು ಸೂಚಿಸಲಾಗಿದೆ:

ಮಾದರಿ 1: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಅದೇ ಗ್ರಾಮ/ಸ್ಥಳದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಸೇರ್ಪಡೆಯಾಗುವ ಬಗ್ಗೆ ಮಾಹಿತಿ.

ಮಾದರಿ 2: ಆಂಗ್ಲ ಮಾಧ್ಯಮ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿರುವ ಸ್ಥಳದಲ್ಲಿ ಕೇವಲ ಕನ್ನಡ ಮಾಧ್ಯಮದ ಪ್ರೌಢಶಾಲೆ ಮಾತ್ರ ಇದ್ದಲ್ಲಿ, ಅಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಪ್ರಸ್ತಾವನೆ ಸಲ್ಲಿಸುವುದು.

ಮಾದರಿ 3: ವಿದ್ಯಾರ್ಥಿಗಳಿರುವ ಸ್ಥಳದಲ್ಲಿ ಯಾವುದೇ ಸರ್ಕಾರಿ ಪ್ರೌಢಶಾಲೆ ಇಲ್ಲದಿದ್ದಲ್ಲಿ, ಹಾಲಿ ಇರುವ ಹಿರಿಯ ಪ್ರಾಥಮಿಕ ಶಾಲೆಯನ್ನೇ 8ನೇ ತರಗತಿಯವರೆಗೆ ಉನ್ನತೀಕರಿಸಿ ಆಂಗ್ಲ ಮಾಧ್ಯಮ ಆರಂಭಿಸುವ ಕುರಿತು ಪ್ರಸ್ತಾವನೆ.

ಮಾದರಿ 4: ಈಗಾಗಲೇ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸುವ ಕುರಿತು ಮಾಹಿತಿ.

ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಈ ಮಾಹಿತಿಯನ್ನು ನಿಗದಿತ ನಮೂನೆಗಳಲ್ಲಿ ಭರ್ತಿ ಮಾಡಿ, ದಿನಾಂಕ 08.05.2026ರ ಒಳಗಾಗಿ ಇಲಾಖೆಯ ಇ-ಮೇಲ್ ವಿಳಾಸಕ್ಕೆ (sskpoecell@gmail.com) ಸಲ್ಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಕ್ರಮದಿಂದಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಲ್ಲಿಯೂ ಆಂಗ್ಲ ಮಾಧ್ಯಮ ಶಿಕ್ಷಣ ಮುಂದುವರಿಸಲು ಅನುಕೂಲವಾಗಲಿದೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...