ಜನಗಣತಿ ಆದಾಗಲೇ ಶೋಷಿತ ಸಮುದಾಯಗಳಿಗೆ ಶಿಕ್ಷಣ, ಆರೋಗ್ಯ, ನೌಕರಿ ಸಿಗಲು ಸಾಧ್ಯ : ಬಿ.ಕೆ.ಹರಿಪ್ರಸಾದ್

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.27 : ಜನಗಣತಿ ಆದಾಗಲೇ ಶೋಷಿತ ಸಮುದಾಯಗಳಿಗೆ ಶಿಕ್ಷಣ, ಆರೋಗ್ಯ, ನೌಕರಿ ಸಿಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಹಿಂದುಳಿದ ಹಾಗೂ ಅತಿ ಹಿಂದುಳಿದ ಸಮುದಾಯ ವರ್ಗಗಳ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ದಲಿತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಅಲ್ಪಸಂಖ್ಯಾತರು, ತಳಸಮುದಾಯದವರು ಆಯಾ ಜನಸಂಖ್ಯೆಗನುಗುಣವಾಗಿ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಳ್ಳಬೇಕಾಗಿರುವುದರಿಂದ ಜಾಗೃತಿ ಮೂಡಿಸುವುದಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶ ನಡೆಸಿದೆವು. ಅದರಂತೆ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶಗಳನ್ನು ನಡೆಸಿ ಸರ್ಕಾರದ ಗಮನಕ್ಕೆ ತರಬೇಕಾಗಿರುವುದರಿಂದ ಮೊದಲು ಒಗ್ಗಟ್ಟಾಗಿ ಎಂದು ಕರೆ ನೀಡಿದರು.

ರಾಜೀವ್‍ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲಾತಿ ನೀಡಿದರು. ಹಿಂದುಳಿದವರು, ಅಲ್ಪಸಂಖ್ಯಾತರು, ಎಸ್ಸಿ, ಎಸ್ಟಿ.ಗಳಿಗೆ ಸಮಾನ ಅವಕಾಶ ಸಿಗಬೇಕಾಗಿರುವುದರಿಂದ ದೇಶದಲ್ಲಿ ಜನಗಣತಿ ಆಗಬೇಕು. ಮೀಸಲಾತಿಗೂ ಜನಗಣತಿಗೂ ವ್ಯತ್ಯಾಸವಿದೆ. ಸರ್ಕಾರಕ್ಕೆ ಹೆಚ್ಚು ತೆರಿಗೆ ಕಟ್ಟುವವರು ತಳಸಮುದಾಯದವರು.
ಶ್ರಮಜೀವಿಗಳು ಮೊದಲು ಒಂದಾಗಬೇಕಿದೆ. ಸಂವಿಧಾನದ ಆಶಯದಂತೆ ಎಲ್ಲರಿಗೂ ಮೂಲಭೂತ ಸೌಲಭ್ಯಗಳು ಸಿಗಬೇಕು. ಬೆಂಗಳೂರಿನಲ್ಲಿ ಪಕ್ಷಾತೀತವಾಗಿ ಸೇರಿಕೊಂಡು ಸಮಾವೇಶ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ಎಚ್ಚರಿಸುವುದಕ್ಕಾಗಿ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶಗಳು ನಡೆಯಬೇಕು. ಆಗ ಆಹ್ವಾನಿಸಿ ನಾನು ಕೂಡ ಬರುತ್ತೇನೆಂದರು.
ಇಲ್ಲಿಯವರೆಗೂ ರಾಜ್ಯದಲ್ಲಿ ಕೇವಲ ನಾಲ್ಕೈದು ಸಮುದಾಯದವರು ಮಾತ್ರ ಅಧಿಕಾರ ನಡೆಸಿದ್ದಾರೆ. ರಾಜಕೀಯವಾಗಿ ದೊಡ್ಡ ಶಕ್ತಿಯನ್ನು ತೋರಿಸಬೇಕಾಗಿರುವುದರಿಂದ ತಳಸಮುದಾಯದವೆರಲ್ಲಾ ಒಂದಾಗಿ ಸೇರಬೇಕೆಂದು ಹೇಳಿದರು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ ಹಿಂದುಳಿದವರು, ಶೋಷಿತರು, ತಳಸಮುದಾಯದವರು, ಅಲ್ಪಸಂಖ್ಯಾತರು, ಎಸ್ಸಿ.ಎಸ್ಟಿ.ಗಳ ಜೊತೆ ನಾನಿದ್ದೇನೆ. ಯಾವುದೇ ಜಾತಿಯಿಂದ ನಾನು ಗುರುತಿಸಿಕೊಂಡಿಲ್ಲ. ಜಾತಿ ಬಗ್ಗೆ ಮಾತನಾಡುವಷ್ಟು ದೊಡ್ಡ ಮನುಷ್ಯ ನಾನಲ್ಲ. ಮನೆಯಲ್ಲಿಯೂ ಅದನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಿಮ್ಮ ಸಭೆಗೆ ನನ್ನ ಬೆಂಬಲವಿದೆ ಎಂದು ಭರವಸೆ ನೀಡಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಸ್ಪರ್ಧಾಕಾಂಕ್ಷಿ, ಜೆಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ, ಮಡಿವಾಳ ಸಮಾಜದ ಶಿವಲಿಂಗಪ್ಪ, ಸವಿತಾ ಸಮಾಜದ ಎನ್.ಡಿ.ಕುಮಾರ್, ಅಖಿಲಭಾರತ ವಿಶ್ವಕರ್ಮ ಪರಿಷತ್ ರಾಜ್ಯಾಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಶಂಕರ್‍ಮೂರ್ತಿ, ಛಲವಾದಿ ಸಮಾಜದ ಶ್ರೀಮತಿ ರೇಣುಕಶಿವು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ನಗರಾಧ್ಯಕ್ಷ ಯು.ಲಕ್ಷ್ಮಿಕಾಂತ್ ಸೇರಿದಂತೆ ವಿವಿಧ ಸಮುದಾಯದವರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

37 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago