Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದೆಹಲಿಯಲ್ಲಿ ಸ್ಪೋಟ : ಕರ್ನಾಟಕದಲ್ಲೂ ಹೈ ಅಲರ್ಟ್..!

---Advertisement---

ಬೆಂಗಳೂರು: ದೆಹಲಿಯ ಕೆಂಪು ಕೋಟೆಯಲ್ಲಿ ನಿನ್ನೆ ನಡೆದ ಬ್ಲಾಸ್ಟ್ ನಿಂದ ಒಂಭತ್ತು ಜನ ಪ್ರಾಣ ಕಳೆದುಕೊಂಡಿದ್ದಾರೆ. ಬ್ಲಾಸ್ಟ್ ತೀವ್ರತೆ ಹೆಚ್ಚಾಗಿನೆ ಇದೆ. ಸದ್ಯ ದೆಹಲಿ ಪೊಲೀಸರು ಇದರ ತನಿಖೆಯನ್ನು ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅದರಲ್ಲೂ ಜನರ ಓಡಾಟ ಹೆಚ್ಚಾಗಿರುವ ಕಡೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಎಲ್ಲೆಡೆ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಮಾಲ್, ಲಾಡ್ಜ್, ಹೊಟೇಲ್, ರೈಲ್ವೆ ನಿಲ್ದಾಣಗಳಲ್ಲಿ ಈ ಸಂಬಂಧ ಪರಿಶೂಲನೆ ನಡೆಸಲಾಗುತ್ತಿದೆ.

ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಬೆಂಗಳೂರು ಪೊಲೀಸರ ಜೊತೆ ಮಾತಾನಾಡಿ ರಾಜ್ಯದಲ್ಲೂ ಅಲರ್ಟ್‌ ಘೋಷಿಸಿದ್ದೇವೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆಯೊಂದಿಗೆ ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಧೀನದ ಕಚೇರಿಗಳ ಭದ್ರತೆಗೆ ಬೆಂಗಳೂರು ಕಮಿಷನರ್ ಸೂಚಿಸಿದ್ದಾರೆ. ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಮಾಡಬೇಕು. ಲಾಡ್ಜ್ ಗಳನ್ನು ತಪಾಸಣೆ ಮಾಡಬೇಕು, ಮಾತ್ರವಲ್ಲದೇ ಅನುಮಾನಸ್ಪದ ವ್ಯಕ್ತಿಗಳು ವಿಚಾರಣೆ ಮಾಡಬೇಕು. ಲಾಡ್ಜ್‌ನಲ್ಲಿ ತಂಗಿರೋ ಹೊರ ರಾಜ್ಯದವರ ವಿಚಾರಣೆ ನಡೆಸುವಂತೆ ಕಮಿಷನರ್ ನಗರದ ಎಲ್ಲಾ ಇನ್ಸ್​​ಪೆಕ್ಟರ್​ಗಳಿಗೆ  ಖಡಕ್​ ಸೂಚನೆ ಕೊಟ್ಟಿದ್ದಾರೆ.

ಬಿಹಾರದಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋ*ದಿಂದಾಗಿ, 2ನೇ ಹಂತದ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಬಿಹಾರದಲ್ಲಿ ತೀವ್ರ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ರಾಜಧಾನಿ ಪಾಟ್ನಾ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್‌ ಸರ್ಪಗಾವಲು ಹಾಕಲಾಗಿದ್ದು, ಪ್ರಮುಖವಾಗಿ ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಹೊರ ರಾಜ್ಯದಿಂದ ಬಿಹಾರ ಪ್ರವೇಶಿಸುವವರ ಮೇಲೆ ನಿಗಾ ವಹಿಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now