ಬೆಂಗಳೂರು: ದೆಹಲಿಯ ಕೆಂಪು ಕೋಟೆಯಲ್ಲಿ ನಿನ್ನೆ ನಡೆದ ಬ್ಲಾಸ್ಟ್ ನಿಂದ ಒಂಭತ್ತು ಜನ ಪ್ರಾಣ ಕಳೆದುಕೊಂಡಿದ್ದಾರೆ. ಬ್ಲಾಸ್ಟ್ ತೀವ್ರತೆ ಹೆಚ್ಚಾಗಿನೆ ಇದೆ. ಸದ್ಯ ದೆಹಲಿ ಪೊಲೀಸರು ಇದರ ತನಿಖೆಯನ್ನು ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅದರಲ್ಲೂ ಜನರ ಓಡಾಟ ಹೆಚ್ಚಾಗಿರುವ ಕಡೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಎಲ್ಲೆಡೆ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಮಾಲ್, ಲಾಡ್ಜ್, ಹೊಟೇಲ್, ರೈಲ್ವೆ ನಿಲ್ದಾಣಗಳಲ್ಲಿ ಈ ಸಂಬಂಧ ಪರಿಶೂಲನೆ ನಡೆಸಲಾಗುತ್ತಿದೆ.
ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಬೆಂಗಳೂರು ಪೊಲೀಸರ ಜೊತೆ ಮಾತಾನಾಡಿ ರಾಜ್ಯದಲ್ಲೂ ಅಲರ್ಟ್ ಘೋಷಿಸಿದ್ದೇವೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆಯೊಂದಿಗೆ ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಧೀನದ ಕಚೇರಿಗಳ ಭದ್ರತೆಗೆ ಬೆಂಗಳೂರು ಕಮಿಷನರ್ ಸೂಚಿಸಿದ್ದಾರೆ. ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಮಾಡಬೇಕು. ಲಾಡ್ಜ್ ಗಳನ್ನು ತಪಾಸಣೆ ಮಾಡಬೇಕು, ಮಾತ್ರವಲ್ಲದೇ ಅನುಮಾನಸ್ಪದ ವ್ಯಕ್ತಿಗಳು ವಿಚಾರಣೆ ಮಾಡಬೇಕು. ಲಾಡ್ಜ್‌ನಲ್ಲಿ ತಂಗಿರೋ ಹೊರ ರಾಜ್ಯದವರ ವಿಚಾರಣೆ ನಡೆಸುವಂತೆ ಕಮಿಷನರ್ ನಗರದ ಎಲ್ಲಾ ಇನ್ಸ್ಪೆಕ್ಟರ್ಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಬಿಹಾರದಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋ*ದಿಂದಾಗಿ, 2ನೇ ಹಂತದ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಬಿಹಾರದಲ್ಲಿ ತೀವ್ರ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ರಾಜಧಾನಿ ಪಾಟ್ನಾ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಪ್ರಮುಖವಾಗಿ ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಹೊರ ರಾಜ್ಯದಿಂದ ಬಿಹಾರ ಪ್ರವೇಶಿಸುವವರ ಮೇಲೆ ನಿಗಾ ವಹಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















