Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ: ಸರ್ಕಾರದಿಂದ ಅಧಿಕೃತ ಆದೇಶ

---Advertisement---

ಬೆಂಗಳೂರು: ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ದಿನಾಂಕ 03.06.2026 ರಂದು ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಜೂನ್ 4, 2026 ರಂದು ಈ ಆದೇಶವನ್ನು ಹೊರಡಿಸಿದ್ದಾರೆ.

ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಅನ್ವಯ:
ಸರ್ಕಾರದ ಪ್ರಸ್ತಾವನೆಯ ಪ್ರಕಾರ, ರಾಜ್ಯದ ಪ್ರಮುಖ ನಾಲ್ಕು ಸಾರಿಗೆ ಸಂಸ್ಥೆಗಳಾದ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)

ಈ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಈ ಮಹತ್ವದ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ವಿವರವಾದ ಶರತ್ತುಗಳು ಮತ್ತು ನಿಬಂಧನೆಗಳನ್ನು ಸರ್ಕಾರವು ಶೀಘ್ರದಲ್ಲೇ ಪ್ರತ್ಯೇಕವಾಗಿ ಹೊರಡಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಚಿವ ಸಂಪುಟ ಪ್ರಕರಣ ಸಂಖ್ಯೆ: ಸಿ.310/2026 ರ ಅನ್ವಯ ಈ ಆದೇಶವನ್ನು ರಾಜ್ಯಪಾಲರ ಆಜ್ಞಾನುಸಾರ ಹೊರಡಿಸಲಾಗಿದೆ.

ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾರಿಗೆ ವೆಚ್ಚದ ಹೊರೆ ತಪ್ಪಲಿದ್ದು, ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಅನುಕೂಲವಾಗಲಿದೆ.

Join WhatsApp

Join Now

Join Telegram

Join Now